ವರದಿ: ವಾಲ್ಟರ್ ಮೊಂತೇರೊ
ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್:
13ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪೂರ್ವಸಿದ್ಧತಾ ಸಭೆ
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಸೆಪ್ಟೆಂಬರ್ 2 ರಂದು ಸೋಮವಾರ ಅಬ್ಬನಡ್ಕದ ಕುಂಟಲಗುಂಡಿಯಲ್ಲಿ ಜರಗಲಿರುವ 13ನೇ ವರ್ಷದ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮತ್ತು ಪೂರ್ವಸಿದ್ಧತಾ ಸಭೆಯು ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ಆಡಳಿತ ಕಚೇರಿಯಲ್ಲಿ ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್ ಪೂಜಾರಿ ಅಬ್ಬನಡ್ಕರವರ ಅಧ್ಯಕ್ಷತೆಯಲ್ಲಿ ಸಂಘದ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್‍ರವರ ಘನ ಉಪಸ್ಥಿತಿಯಲ್ಲಿ ಜರಗಿತು.
ಸಭೆಯಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ನಿಕಟ ಪೂರ್ವಾಧ್ಯಕ್ಷ ಕಾಸ್ರಬೈಲು ಸುರೇಶ್ ಪೂಜಾರಿ ಸಮಾರಂಭದ ರೂಪು ರೇಷೆಗಳ ಬಗ್ಗೆ ಸೂಕ್ತ ಸಲಹೆ-ಸೂಚನೆಗಳನ್ನು ನೀಡಿದರು. ಈ ಸಂಧರ್ಭದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ಬಿರೋಟ್ಟು ದಿನೇಶ್ ಪೂಜಾರಿ, ಕೋಶಾಧಿಕಾರಿ ಹರಿಪ್ರಸಾದ್ ಆಚಾರ್ಯ, ಭಜನಾ ಸಮಿತಿ ಅಧ್ಯಕ್ಷ ಮಂಜುನಾಥ ಆಚಾರ್ಯ, ಮಹಿಳಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಉಪಾಧ್ಯಕ್ಷ ಹರೀಶ್ ಪೂಜಾರಿ, ಹರಿಣಾಕ್ಷಿ ಪೂಜಾರಿ, ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷ ವಿಠಲ ಮೂಲ್ಯ, ಉಪಾಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಜೊತೆ ಕಾರ್ಯದರ್ಶಿ ಬಾಲಕೃಷ್ಣ ಮಡಿವಾಳ, ಕೋಶಾಧಿಕಾರಿ ಲಲಿತಾ ಆಚಾರ್ಯ ಸದಸ್ಯರಾದ ಲೀಲಾ ಪೂಜಾರಿ, ಹರಿಣಿ ಪೂಜಾರಿ, ಸುಲೋಚನಾ ಕೋಟ್ಯಾನ್ ಮತ್ತಿತರಿದ್ದರು.
ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.