ವರದಿ: ವಾಲ್ಟರ್ ಮೊಂತೇರೊ
ಕೆದಿಂಜೆ ಶಾಲೆ: ಸುವಾಸಿನಿ ವಿ. ಶೆಟ್ಟಿಯವರಿಗೆ ಶ್ರದ್ಧಾಂಜಲಿ
ಕೆದಿಂಜೆ ಶ್ರೀ ವಿದ್ಯಾಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕರಾದ ದಿವಂಗತ ಸುವಾಸಿನಿ ವಿ. ಶೆಟ್ಟಿಯವರು ಇತ್ತೀಚೆಗೆ ನಿಧನರಾಗಿದ್ದು ಅವರ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಬರಬೈಲು ಹಾಗೂ ಕೆದಿಂಜೆ ಶಾಲೆಯಲ್ಲಿ ಕಳೆದ 30 ವರ್ಷಗಳಿಂದ ಶಿಕ್ಷಕ ವೃತ್ತಿಯಲ್ಲಿದ್ದು ಕೆದಿಂಜೆ ಶಾಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಶಾಲೆಯ ಅಭಿವೃದ್ಧಿಗಾಗಿ ಬಹಳಷ್ಟು ಶ್ರಮಿಸಿದ್ದು ಇಂದು ಅವರ ನಿಧನ ನಮ್ಮ ವಿದ್ಯಾಸಂಸ್ಥೆಗೆ ತುಂಬಲಾರದ ನಷ್ಟವೆಂದು ಶಾಲಾ ನಿವೃತ್ತ ಮುಖ್ಯ ಶಿಕ್ಷಕ ಕೆ. ಅನಿಲ್ ಕುಮಾರ್ ಬೇಸರ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಶಾಲಾ ಸಂಚಾಲಕ ಯು.ಶೇಷಗಿರಿ ಕಾಮತ್, ಶಾಲಾ ನಿವೃತ್ತ ಮುಖ್ಯ ಶಿಕ್ಷಕರಾದ ಪ್ರಭಾಕರ್ ಶೆಟ್ಟಿ, ಎನ್. ಸುಧಾಕರ್ ರಾವ್, ಶಾಲಾ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುರೇಶ್ ಕಾಮತ್, ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಬಿರೋಟ್ಟು ದಿನೇಶ್ ಪೂಜಾರಿ, ಕಾರ್ಯದರ್ಶಿ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ಬಿ.ಎಚ್.ಶಿವರಾಮ ಆಚಾರ್ಯ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಹರಿಣಿ ಸುಂದರ ಪೂಜಾರಿ, ಶಾಲಾ ಆಡಳಿತ ಮಂಡಳಿ ಸಮಿತಿ ಸದಸ್ಯೆ ಸಕು ಕಾಮತ್, ಶಾಲಾ ಮುಖ್ಯ ಶಿಕ್ಷಕ ಪ್ರಥ್ವೀರಾಜ್ ಬಲ್ಲಾಳ್, ಸಹಶಿಕ್ಷಕಿ ರೇಖಾ ಪೈ, ಶಾಲಾ ಗೌರವ ಶಿಕ್ಷಕಿಯರು, ಹಳೆವಿದ್ಯಾರ್ಥಿಗಳು, ವಿದ್ಯಾರ್ಥಿ ವೃಂದದವರು ಉಪಸ್ಥಿತಿತರಿದ್ದರು.