ಶ್ರೀನಿವಾಸಪುರದಲ್ಲಿ ಏರ್ಪಡಿಸಲಾಗಿದ್ದ ಡಿ.ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಸಮಾರಂಭ ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಉದ್ಘಾಟಿಸಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರದಲ್ಲಿ ಏರ್ಪಡಿಸಲಾಗಿದ್ದ ಡಿ.ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಸಮಾರಂಭ ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಉದ್ಘಾಟಿಸಿದರು.
ಶ್ರೀನಿವಾಸಪುರ:  ಅರಸು ಅವರು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿದ ಧೀಮಂತ ನಾಯಕ. ಅವರ ದೂರಾಲೋಚನೆಯಿಂದ ರಾಜ್ಯ ಪ್ರಗತಿ ಸಾಧಿಸುವಂತಾಯಿತು ಎಂದು ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಹೇಳಿದರು.
  ಪಟ್ಟಣದಲ್ಲಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಿ.ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಅವರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿದ್ದರು ಎಂದು ಹೇಳಿದರು.
  ದೃಢ ನಿರ್ಧಾರಕ್ಕೆ ಹೆಸರುವಾಸಿಯಾಗಿದ್ದ ಅರಸು ಅವರು ತಮ್ಮ ಜೀವನ ಪೂರ್ತಿ ದೀನ ದಲಿತರ ಅಭಿವೃದ್ಧಿಗೆ ಶ್ರಮಿಸಿದರು. ಅವರ ಶ್ರದ್ಧಾವಂತ ಪ್ರಯತ್ನದ ಫಲವಾಗಿ ನಾಡಿನ ಬಡವರ ಬದುಕು ಹಸನಾಗಲು ಸಾಧ್ಯವಾಯಿತು ಎಂದು ಹೇಳಿದರು.
    ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌. ಆನಂದ್‌, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರಾಜಣ್ಣ, ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌, ವಿದ್ಯಾರ್ಥಿನಿ ವರ್ಷಿಣಿ, ದೇವರಾಜ ಅರಸು ಅವರ ಜೀವನ ಸಾಧನೆ ಕುರಿತು ಮಾತನಾಡಿದರು.
ಹಿಂದುಳಿದ ವರ್ಗಕ್ಕೆ ಸೇರಿದ ಎಸ್ಸೆಸ್ಸೆಲ್‌ಸಿ ಹಾಗೂ ಪಿಯುಸಿ  ವಿದ್ಯಾರ್ಥಿಗಳಿಗೆ, ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣ ಇಲಾಖೆ ವತಿಯಿಂದ ತಲಾ ರೂ.1000 ನಗದು ಬಹುಮಾನ ನೀಎಲಾಯಿತು. ಪುರಸಭೆಯಿಂದ ಜನ್ಮ ದಿನಾಚರಣೆಗೆ 20ಸಾವಿರ ರೂ ನೀಡಲಾಯಿತು.
  ತಾಲ್ಲೂಕು ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣ ಇಲಾಖೆ ಅಧಿಕಾರಿ ನಾರಾಯಣಸ್ವಾಮಿ, ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ,  ಶಿರಸ್ತೇದಾರ್‌ ನಾರಾಯಣಸ್ವಾಮಿ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ವೇಮಣ್ಣ,  ಬಂಡಪಲ್ಲಿ ಚಂದ್ರಾರೆಡ್ಡಿ ಉಪಸ್ಥಿತರಿದ್ದರು.