ಶ್ರೀನಿವಾಸಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶಾಸಕ ಡಿ.ಕೆ.ಶಿವಕುಮಾರ್‌ ಬಂಧನ ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ಶಾಸಕ ಡಿ.ಕೆ.ಶಿವಕುಮಾರ್‌ ಬಂಧನ ವಿರೋಧಿಸಿ ಬುಧವಾರ ಪ್ರತಿಭಟನೆ ನಡೆಸಿದರು.
ಶ್ರೀನಿವಾಸಪುರ: ಕಾಂಗ್ರೆಸ್‌ ಕಾರ್ಯಕರ್ತರು ಶಾಸಕ ಡಿ.ಕೆ.ಶಿವಕುಮಾರ್‌ ಅವರ ಬಂಧನ ವಿರೋಧಿಸಿ  ಪ್ರತಿಭಟನೆ ನಡೆಸಿದರು. 
  ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಅಶೋಕ್‌ ಪ್ರತಿಭಟನೆ ನಿರತ ಕಾರ್ಯಕರ್ತನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿ ವಿರೋಧ ಪಕ್ಷಗಳ ಪ್ರಮುಖ ನಾಯಕರನ್ನು ರಾಜಕೀಯ ಪ್ರೇರಿತವಾಗಿ ಜೈಲಿಗೆ ಕಳುಹಿಸುವ ಮೂಲಕ ಪ್ರಜಾಪ್ರಭುತ್ವ ವಿರೋಧಿ ನಿಲುವು ಪ್ರದರ್ಶಿಸುತ್ತಿದೆ ಎಂದು ಆಪಾದಿಸಿದರು.
  ಡಿ.ಕೆ.ಶಿವಕುಮಾರ್‌ ಇಡಿ ವಿಚಾರಣೆಗೆ ಹಾಜರಾಗಿದ್ದರು. ಎಷ್ಟೇದಿನಗಳಾದರು ಅದು ಕೇಳುವ ಪ್ರಶ್ನೆಗಳಿಗೆ ಉತ್ತರಿಸುವುದಾಗಿ ತಿಳಿಸಿದ್ದರು. ಆದರೂ ಅವರನ್ನು ವಿನಾಕಾರಣ ಬಂಧಿಸಲಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ದೇಶದ ಪ್ರಧಾನಿ ಹಾಗೂ ಗೃಹ ಸಚಿವರು ರಾಜಕೀಯ ದ್ವೇಷಕ್ಕೆ  ಮುಖಂಡರನ್ನು ತನಿಖಾ ಸಂಸ್ಥೆಗಳ ಮೂಲಕ ಮಣಿಸಲು ಪ್ರಯತ್ನಿಸುವುದು ಸರಿಯಲ್ಲ ಎಂದು ಹೇಳಿದರು. 
  ಡಿ.ಕೆ.ಶಿವಕುಮಾರ್‌ ಅವರನ್ನುಹಬ್ಬದ ದಿನ ತಮ್ಮ ತಂದೆ ಹಾಗೂ ಹಿರಿಯರಿಗೆ ಪೂಜೆ ಮಾಡಲು ಅವಕಾಶ ನೀಡದಿರುವುದು ಅಮಾನವೀಯ. ಇದನ್ನು ದೇಶದ ಜನರು ಪಕ್ಷಾತೀತವಾಗಿ ಖಂಡಿಸಬೇಕು. ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಧ್ವನಿ ಎತ್ತಬೇಕು ಎಂದು ಹೇಳಿದರ.
  ಮುಖಂಡ ನವೀನ್‌ ಕುಮಾರ್‌ ಮಾತನಾಡಿ, ಡಿ.ಕೆ.ಶಿಕುಮಾರ್‌ ಅವರನ್ನು ಬಂಧಿಸುವುದರ ಮೂಲಕ ಕೇಂದ್ರ ಸರ್ಕಾರ ಸೇಡಿನ ರಾಜಕೀಯ ಮಾಡುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಬಂಧನದ ಮೂಲಕ ವಿರೋಧ ಪಕ್ಷಗಳನ್ನು ಮಣಿಸಲು ಸಾಧ್ಯವಿಲ್ಲ. ರಾಜಕೀಯ ಲಾಭಕ್ಕಾಗಿ ಮುಖಂಡರ ಬಂಧನ ಮಾಡುವುದು ಖಂಡನೀಯ ಎಂದು ಹೇಳಿದರು.
  ಮುಖಂಡರಾದ ರೋಣೂರು ಚಂದ್ರಶೇಖರ್‌, ಕೆ.ಕೆ.ಮಂಜುನಾಥರೆಡ್ಡಿ, ಗುರ್ರಪ್ಪ, ಅಯ್ಯಪ್ಪ, ವಾಸು, ವೆಂಕಟರೆಡ್ಡಿ, ವೆಂಕಟೇಶ್‌, ಶ್ರೀನಿವಾಸ್, ಹರೀಶ್‌, ವೇಣು ಮತ್ತಿತರರು ಇದ್ದರು.