ಶ್ರೀನಿವಾಸಪುರದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ವಿಧಾನ ಪರಿಷತ್‌ ಸದಸ್ಯ ತೂಪಲ್ಲಿ ಆರ್‌.ಚೌಡರೆಡ್ಡಿ ಉದ್ಘಾಟಿಸಿದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಗುರುವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭವನ್ನು ವಿಧಾನ ಪರಿಷತ್‌ ಸದಸ್ಯ ತೂಪಲ್ಲಿ ಆರ್‌.ಚೌಡರೆಡ್ಡಿ ಉದ್ಘಾಟಿಸಿದರು.

ಶ್ರೀನಿವಾಸಪುರ: ಸರ್ಕಾರಿ ಶಾಲಾ ಶಿಕ್ಷಕರು ಪೋಷಕರ ಮನವೊಲಿಸಿ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.
  ಕನಕ ಸಮುದಾಯ ಭವನದಲ್ಲಿ  ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿ, ಉತ್ತಮ ಶಿಕ್ಷಕರು ವಿದ್ಯಾರ್ಥಿಗಳ ಹೃದಯದಲ್ಲಿ ಉಳಿಯುತ್ತಾರೆ. ಅಂಥ ಶಿಕ್ಷಕರಾಗಲು ಡಾ. ಎಸ್‌.ರಾಧಾಕೃಷ್ಣನ್‌, ಡಾ. ಅಬು್ದುಲ್‌ ಕಲಾಂ ಅವರಂಥ ಶಿಕ್ಷಕರ ಆದರ್ಶ ಪಾಲಿಸಬೇಕು. ಶಾಲಾ ಶಿಕ್ಷಕ ಸಮುದಾಯದ ನಡುವೆ ಶಕ್ತಿಯಾಗಿ ಬೆಳೆಯಬೇಕು ಎಂದು ಹೇಳಿದರು.
  ಜಾತಿ, ಮತ ಹಾಗೂ ಪಕ್ಷದ ಹೆಸರಲ್ಲಿ ಶಿಕ್ಷಣ ಸಮುದಾಯವನ್ನು ಒಡೆಯಲಾಗುತ್ತಿದೆ. ಶಿಕ್ಷಕರಲ್ಲಿ ಸಮಾಜ ಕಟ್ಟುವ ಕಾರ್ಯ ನಿರೀಕ್ಷಿತ ಮಟ್ಟದಲ್ಲಿ ನಡೆಯುತ್ತಿಲ್ಲ. ಶಿಕ್ಷಕ ವಿದ್ಯಾರ್ಥಿ ಆಗಬೇಕು. ಅಕ್ಷರ ಭಂಡಾರವಾಗದೆ, ಜ್ಞಾನ ಭಂಡಾರವಾಗಬೇಕು. ಭ್ರಷ್ಟ ವ್ಯವಸ್ಥೆಯ ವಿರುದ್ಧ ಮಕ್ಕಳಲ್ಲಿ ಅರಿವು ಮೂಡಿಸಬೇಕು. ಭ್ರಷ್ಟಾಚಾರದ ವಿರುದ್ಧ ಮಕ್ಕಳನ್ನು ತಯಾರು ಮಾಡಬೇಕು ಎಂದು ಅಭಿಪ್ರಾಯಪಟ್ಟರು.
    ವಿಧಾನ ಪರಿಷತ್‌ ಸದಸ್ಯ ತೂಪಲ್ಲಿ ಆರ್‌ ಚೌಡರೆಡ್ಡಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ಮಕ್ಕಳ ವ್ಯಕ್ತಿತ್ವ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಹಿರಿದು. ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಸಾಣೆ ಹಿಡಿಯುವ ಕೆಲಸ ಶಿಕ್ಷಕರಿಂದ ನಡೆಯಬೇಕು  ಎಂದು ಹೇಳಿದರು.
  ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಮಾತನಾಡಿ, ಶಿಕ್ಷಕರು ಮಕ್ಕಳಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸಬೇಕು. ಜೀವನ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಸರ್ಕಾರ ಶಿಕ್ಷಕರಿಗೆ ಉತ್ತಮ ಸೌಲಭ್ಯ ನೀಡುತ್ತಿದೆ. ಅದನ್ನು ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸ್ಫೂರ್ತಿಯಾಗಬೇಕು ಎಂದು ಹೇಳಿದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ರೇಣುಕಮ್ಮ, ಡಯಟ್ ಹಿರಿಯ ಉಪನ್ಯಾಸಕ ರಾಘವೇಂದ್ರ, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಎಂ.ವೇಮಣ್ಣ ಸಮಾರಂಭದಲ್ಲಿ ಶಿಕ್ಷಕರ ದಿನಾಚರಣೆ ಮಹತ್ವ ಕುರಿತು ಮಾತನಾಡಿದರು.
  ಸಮಾರಂಭದಲ್ಲಿ ನಿವೃತ್ತ ಶಿಕ್ಷಕರು ಹಾಗೂ ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಲಾಯಿತು.
  ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್‌, ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌, ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್‌, ಮುಖಂಡ ಕೆ.ಕೆ.ಮಂಜುನಾಥರೆಡ್ಡಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಕೆ.ಎಚ್‌.ಸಂಪತ್‌ ಕುಮಾರ್‌, ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್‌.ಗೋವಿಂದರೆಡ್ಡಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್‌, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸುಬ್ರಮಣಿ, ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಸುಲೋಚನ, ಬಿಆರ್‌ಸಿ ಸಂಯೋಜಕಿ ವಸಂತ, ಮುಖಂಡರಾದ ಕಲಾ ಶಂಕರ್‌, ಬೈರೇಗೌಡ, ಎನ್.ದೇವರೆಡ್ಡಿ, ರಾಮಚಂದ್ರ, ಜಿ.ವಿ.ಚಂದ್ರಪ್ಪ, ಪದ್ಮನಾಭ ಮತ್ತಿತರರು ಇದ್ದರು.