ನಗರದಲ್ಲಿ ಹದಗೆಟ್ಟ ರಸ್ತೆಗಳ ನಿರ್ಮಾಣಕ್ಕೆ ಶೀಘ್ರ ಕ್ರಮ: ಜೆ.ಮಂಜುನಾಥ್

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ನಗರದಲ್ಲಿ ಹದಗೆಟ್ಟ ರಸ್ತೆಗಳ ನಿರ್ಮಾಣಕ್ಕೆ ಶೀಘ್ರ ಕ್ರಮ: ಜೆ.ಮಂಜುನಾಥ್

ಕೋಲಾರ : ನಗರದಲ್ಲಿ ರಸ್ತೆಗಳು ಸಾಕಷ್ಟು ಹದಗೆಟ್ಟಿದ್ದು ಇವುಗಳನ್ನು ಶೀಘ್ರವಾಗಿ ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ತಿಳಿಸಿದರು. 

ಇಂದು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಅಧಿಕಾರಿಗಳ ಜೊತೆಯಲ್ಲಿ ರಂಗಮಂದಿರ ರಸ್ತೆ, ಕಾಳಿಕಾಂಬ ರಸ್ತೆ, ನೂತನ ಸರ್ಕಾರಿ ಬಸ್ ನಿಲ್ದಾಣ ರಸ್ತೆ, ಕ್ಲಾಕ್‍ಟವರ್ ರಸ್ತೆ, ಶಾರದ ಚಿತ್ರ ಮಂದಿರ ರಸ್ತೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸ್ಥಿತಿಗತಿಗಳನ್ನು ವೀಕ್ಷಿಸಿ ನಂತರ ಅವರು ಮಾತನಾಡಿದರು. 

ನಗರದಲ್ಲಿ ರಸ್ತೆಗಳ ದುರಸ್ಥಿ ಕಾಮಗಾರಿಗಳು ನಡೆಯುತ್ತಿದೆ. ಕೆಲವು ಕಾರಣಗಳಿಂದ ಕಾಮಗಾರಿಗಳು ತಡವಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಇದನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ನಗರಸಭೆ ಮತ್ತು ಪಿ.ಡಬ್ಲ್ಯೂ.ಡಿ. ಇಲಾಖೆಗಳಿಗೆ ಸೂಚಿಸಲಾಗಿದೆ ಎಂದರು. 

ಕಸದ ರಾಶಿಗಳು ನಗರದಲ್ಲಿ ಕಾಣುತ್ತಿವೆ. ಕಸ ವಿಲೇವಾರಿ ಮಾಡಬೇಕಾದ ಕೆಲಸವನ್ನು ಸೂಕ್ತವಾಗಿ ನಿರ್ವಹಿಸಲು ನಗರಸಭೆಯವರಿಗೆ ಸೂಚನೆ ನೀಡಲಾಗಿದೆ. ಅದೇ ರೀತಿ ಕೆಲವು ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್‍ಗಳನ್ನು ಮಾರಾಟ ಮಾಡಲಾಗುತ್ತಿದೆ. ಇದನ್ನು ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಹಾಗಾಗಿ ಪ್ಲಾಸ್ಟಿಕನ್ನು ಬಳಕೆ ಮಾಡಬಾರದು ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಶಾಸಕರಾದ ಕೆ.ಶ್ರೀನಿವಾಸಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಕಾರ್ತೀಕ್ ರೆಡ್ಡಿ, ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿಯಾದ ಜಾಹ್ನವಿ, ನಗರಸಭೆ ಅಧಿಕಾರಿಗಳು ಹಾಗೂ ಪಿ.ಡಬ್ಲ್ಯೂ.ಡಿ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರುಗಳು ಹಾಜರಿದ್ದರು.