ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಸ್ಥಾಪನಾ ದಿನಾಚರಣೆ

ವರದಿ: ವಾಲ್ಟರ್ ಮೊಂತೇರೊ

ನಂದಳಿಕೆ-ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಸ್ಥಾಪನಾ ದಿನಾಚರಣೆ

ಗ್ರಾಮೀಣ ಭಾಗದ ಹಳ್ಳಿ ಪ್ರದೇಶದಲ್ಲಿ ಸ್ಥಾಪಿತಗೊಂಡಂತಹ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ ಇಂದು ಪುಟ್ಟ ಪುಟ್ಟ ಹೆಜ್ಜೆಗಳನ್ನು ಹಾಕುತ್ತಾ, ತನ್ನದೇಯಾದ ವಿನೂತನ ರೀತಿಯ ಕಾರ್ಯಕ್ರಮಗಳನ್ನು ನಡೆಸುತ್ತಾ ಪರಿಸರದಲ್ಲಿ ಯುವ ಪ್ರತಿಭೆಗಳಿಗೆ ವೇದಿಕೆ ನಿರ್ಮಿಸಿಕೊಡುವಲ್ಲಿ ಯಶಸ್ವಿಯಾಗಿದೆ. ಜಿಲ್ಲಾ ಪ್ರಶಸ್ತಿ ಪಡೆದಿರುವ ನಮ್ಮಿ ಸಂಸ್ಥೆ ಸ್ವಚ್ಛ ಭಾರತ್ ಸಮ್ಮರ್ ಇಂಟರ್ನ್‍ಶಿಪ್ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿರುವುದು ನಮ್ಮ ಸಂಸ್ಥೆಯ ಸಾಧನೆಗೆ ಸಂದ ಗೌರವವೆಂದು ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಹೇಳಿದರು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ 20ನೇ ವರ್ಷದ ಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಈ ವರ್ಷ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ಗೆ ಇಪ್ಪತ್ತನೇ ವರ್ಷದ ಸಂಭ್ರಮಾಚರಣೆ ಅಂಗವಾಗಿ ವರ್ಷಪೂರ್ತಿ ವಿನೂತನ ರೀತಿಯ ಸಾಮಾಜಿಕ, ಸಾಂಸ್ಕøತಿಕ, ಕ್ರೀಡಾ, ಧಾರ್ಮಿಕ, ಶೈಕ್ಷಣಿಕ ಮುಂತಾದ ಅನೇಕ ವಿಭಾಗಗಳಲ್ಲಿ ಕಾರ್ಯಕ್ರಮಗಳು ಜರಗಲಿದೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ ಹೇಳಿದರು.
ವೇದಿಕೆಯಲ್ಲಿ ಸಂಘದ ನಿಕಟ ಪೂರ್ವಾಧ್ಯಕ್ಷ ನಂದಳಿಕೆ ರಾಜೇಶ್ ಕೋಟ್ಯಾನ್, ಸಂಘದ ಮಹಾಪೋಷಕರಾದ ಗೀತಾ ಶೆಟ್ಟಿ ಉಪಸ್ಥಿತಿತರಿದ್ದರು.
ಸಂಘದ ಮಹಿಳಾ ಸಂಘಟನಾ ಕಾರ್ಯದರ್ಶಿ ವೀಣಾ ಪೂಜಾರಿ ಸ್ವಾಗತಿಸಿದರು. ಕಾರ್ಯದರ್ಶಿ ಪ್ರಶಾಂತ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಜೊತೆ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ ವಂದಿಸಿದರು.