ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು  ಆರ್‌ಸಿಇಪಿ ಒಪ್ಪಂದ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದಿಂದ  ಪ್ರತಿಭಟನೆ 

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಎದುರು  ಆರ್‌ಸಿಇಪಿ ಒಪ್ಪಂದ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘ  ಹಾಗೂ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದಿಂದ  ಪ್ರತಿಭಟನೆ 
ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು  ಆರ್‌ಸಿಇಪಿ ಒಪ್ಪಂದ ವಿರೋಧಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಹಾಗೂ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಸದಸ್ಯರು ಹಾಗೂ ಹಾಲು ಉತ್ಪಾದಕರು ಸೀಮೆ ಹಸುಗಳೊಂದಿಗೆ ಪ್ರತಿಭಟನೆ ನಡೆಸಿದರು. 
  ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಪ್ರತಿಭಟನೆ ನಿರತರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಸುಂಕ ರಹಿತ ಹಾಲು ಹಾಗೂ ಹಾಲಿನ ಉತ್ಪನ್ನಗಳ ಆಮದಿಗೆ ಒಪ್ಪಿಗೆ ಸೂಚಿಸುವದರ ಮೂಲಕ, ದೇಶದ ಹಾಲು ಉತ್ಪಾದಕರನ್ನು ಬೀದಿ ಪಾಲು ಮಾಡುತ್ತಿದೆ ಎಂದು ಹೇಳಿದರು.
   ದೇಶದಲ್ಲಿ ಕ್ಷೀರೋತ್ಪಾದನೆ ಈಗಾಗಲೇ ನಷ್ಟದ ಉದ್ಯಮವಾಗಿ ಪರಿಣಮಿಸಿದೆ. ಕ್ಷೀರೋತ್ಪಾದಕರಿಗೆ ಉತ್ಪಾದನಾ ವೆಚ್ಚವೂ ಸಿಗುತ್ತಿಲ್ಲ. ಆದ್ದರಿಂದ ಹಾಲಿನ ಬೆಲೆಯನ್ನು ಹೆಚ್ಚಿಸುವಂತೆ ಒತ್ತಾಯಿಸುತ್ತಿರುವಾಗ, ಶೇ.64 ರಷ್ಟು ಆಮದು ಸುಂಕವನ್ನು ತೆಗೆಯುವುದರ ಮೂಲಕ ಅಗ್ಗದ ವಿದೇಶಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತರಿಸಿಕೊಳ್ಳಲು ಮುಂದಾಗಿರುವುದು ರೈತ ವಿರೋಧಿ ನೀತಿಯಾಗಿದೆ ಎಂದು ಅಭಿಪ್ರಾಯಪಟ್ಟರು.
  ಹೈನುಗಾರಿಕೆ ಕ್ಷೇತ್ರವನ್ನು ನಾಶಮಾಡುವಂಥ ಆರ್‌ಸಿಇಪಿ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಸಹಿ ಹಾಕಬಾರದು. ಹಾಲಿನ ಉತ್ಪಾದನಾ ವೆಚ್ಚ ಹೆಚ್ಚುತ್ತಿರುವುದರಿಂದ ಕೃಷಿ ತಜ್ಞ ಡಾ.ಸ್ವಾಮಿನಾಥ್‌ನ ಶಿಫಾರಸ್ಸಿನ ಅನ್ವಯ ಹಾಲಿನ ದರವನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು.
  ಮುಖಂಡರು ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್‌ ಕೆ.ಎನ್‌.ಸುಜಾತ ಅವರಿಗೆ ನೀಡಿದರು.
  ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌, ಕೆಆರ್‌ಆರ್‌ಎಸ್‌ ಅಧ್ಯಕ್ಷ ಎನ್‌.ಜಿ.ಶ್ರೀರಾಮರೆಡ್ಡಿ, ಮುಖಂಡರಾದ ಎನ್‌.ವೀರಪ್ಪರೆಡ್ಡಿ, ರಾಮಣ್ಣ, ವೇಣುಗೋಪಾಲ್, ಎಸ್‌.ಎಂ.ನಾಗರಾಜ್‌, ನಾಗರಾಜರೆಡ್ಡಿ, ಆರ್‌.ವೆಂಕಟೇಶ್‌, ಸೈಯದ್‌ ಫಾರೂಕ್‌, ವೆಂಕಟಲಕ್ಷ್ಮಮ್ಮ, ಸಿ.ಮಂಗಮ್ಮ, ಬೈರಾರೆಡ್ಡಿ, ಶ್ರೀನಿವಾಸ್‌, ನಂಜುಂಡಪ್ಪ, ರಮೇಶ್‌ ನರಸಿಂಹಮೂರ್ತಿ , ಸಿ.ಎಂ.ಗೌಡ, ನಂಜಪ್ಪ ಇದ್ದರು.