ಶ್ರೀನಿವಾಸಪುರದ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಮಾತನಾಡಿದರು.

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

 

ಶ್ರೀನಿವಾಸಪುರದ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಮಾತನಾಡಿದರು.

 

 

ಶ್ರೀನಿವಾಸಪುರ: ಕಂದಾಯ ಇಲಾಖೆ ಅಧಿಕಾರಿಗಳು ಪಿ ನಂಬರ್‌ ತೆಗೆಯುವ ಹಾಗೂ ಪೈಕಿ ನಂಬರ್ ಒಟ್ಟು ಮಾಡುವ ಕೆಲಸವನ್ನು ಶೀಘ್ರವಾಗಿ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಹೇಳಿದರು.
ಪಟ್ಟಣದ ತಹಶೀಲ್ದಾರ್‌ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ತಾಲ್ಲೂಕು ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಅಧಿಕಾರಿಗಳು ಪಿ ನಂಬರ್‌ಗಳನ್ನು ತೆಗೆಯಬೇಕು. ಪೈಕಿ ನಂಬರ್‌ಗಳನ್ನು ಒಟ್ಟುಗೂಡಿಸಬೇಕು. ಈ ಕಾರ್ಯವನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ನಿಗದಿತ ಸಮಯದೊಳಗೆ ಮುಗಿಸಬೇಕು ಎಂದು ಹೇಳಿದರು.
ತಾಲ್ಲೂಕಿನಲ್ಲಿ 9308 ಪಿ ನಂಬರ್‌ಗಳಿವೆ. ಆ ಪೈಕಿ 3500 ನಂಬರ್‌ಗಳ ಪ್ರಗತಿಯಾಗಿದೆ. 2500 ಹಿಡುವಳಿ ನಂಬರ್‌ಗಳ ಒಟ್ಟುಗೂಡಿಸಲಾಗಿದೆ. ಉಳಿದ ನಂಬರ್‌ಗಳನ್ನು ಪರಿಶೀಲಿಸಿ ಶೀಘ್ರವಾಗಿ ವಿಲೆ ಮಾಡಬೇಕು ಎಂದು ಹೇಳಿದರು.
ಇದು ಸರ್ಕಾರದ ಮಹತ್ವದ ಯೋಜನೆಯಾಗಿದೆ. ಇದನ್ನು ಸಮರ್ಪಕವಾಗಿ ಮುಕ್ತಾಯಗೊಳಿಸಿದಲ್ಲಿ ರೈತರಿಗೆ ಹೆಚ್ಚಿನ ಪ್ರಯೋಜನವಾಗುತ್ತದೆ. ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಾಂಘಿಕವಾಗಿ ಕೆಲಸ ಮಾಡುವುದರ ಮೂಲಕ ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
ತಹಶೀಲ್ದಾರ್‌ ಕೆ.ಎನ್‌.ಸುಜಾತ, ಶಿರಸ್ತೇದಾರ್‌ ನರೇಶ್‌, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ ಇದ್ದರು.