ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ  ಏರ್ಪಡಿಸಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್‌ ಮಾತನಾಡಿದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ  ಏರ್ಪಡಿಸಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್‌ ಮಾತನಾಡಿದರು.
ಶ್ರೀನಿವಾಸಪುರ:  ಅಧಿಕಾರಿಗಳು ಸರ್ಕಾರದ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್‌ ಹೇಳಿದರು.
  ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಎಚ್ಚರ ವಹಿಸಬೇಕು.ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟ ಕೆಡದಂತೆ ನಿಗಾ ವಹಿಸಬೇಕು ಎಂದು ಹೇಳಿದರು.
  ವಿವಿಧ ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಬೇಕು. ನಿಯಮಾನುಸಾರ ಯಾವುದೇ ಕೊರತೆ ಇಲ್ಲದಂತೆ ನೋಡಿಕೊಳ್ಳಬೇಕು.  ವಿದ್ಯಾರ್ಥಿ ನಿಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಪೂರಕವಾಗಿ ಯೋಜನೆ ರೂಪಿಸಿ ಜಾರಿಗೆ ತರಬೇಕು ಎಂದು ಹೇಳಿದರು.
  ಅಧಿಕಾರಿಗಳು ತಪ್ಪದೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ, ತಮ್ಮ ಇಲಾಖೆ ಪ್ರಗತಿ ಕುರಿತು ಮಾಹಿತಿ ನೀಡಬೇಕು. ಸಭೆಗೆ ಗೈರು ಹಾಜರಾಗುವುದು ಅಶಿಸ್ತಿನ ಪರಮಾವಧಿಯಾಗುತ್ತದೆ. ಗೈರು ಹಾಜರಾಗಿರುವ ಆಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್‌ ನೀಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗೆ ಸೂಚಿಸಿದರು.
   ಸ್ಥಾಯಿ ಸಮಿತಿ ಅಧ್ಯಕ್ಷ ಆರ್‌.ಜಿ.ನರಸಿಂಹಯ್ಯ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ವ್ಯವಸ್ಥಾಪಕ ಸುರೇಶ್‌, ಅಧಿಕಾರಿ ವಿಜಯಮ್ಮ ಇದ್ದರು.