ಕೋಲಾರ: ಸಿಎಎ, ಎನ್‍ಆರ್‍ಸಿ ಕಾಯಿದೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳ ಜತೆ ಕಾಂಗ್ರೆಸ್, ಜೆಡಿಎಸ್, ದಲಿತಪರ, ಕೆಪಿಆರ್‍ಎಸ್, ಸಿಪಿಎಂ, ಭೀಮಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಸಾಥ್

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

 

 

ಕೋಲಾರ: ಸಿಎಎ, ಎನ್‍ಆರ್‍ಸಿ ಕಾಯಿದೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳ ಜತೆ ಕಾಂಗ್ರೆಸ್, ಜೆಡಿಎಸ್, ದಲಿತಪರ, ಕೆಪಿಆರ್‍ಎಸ್, ಸಿಪಿಎಂ, ಭೀಮಸೇನೆ ಸೇರಿದಂತೆ ವಿವಿಧ ಸಂಘಟನೆಗಳು ಸಾಥ್

 

 

ಕೋಲಾರ:ನಗರದ ಅಮ್ಮವಾರಿ ಪೇಟೆ ವೃತ್ತದಲ್ಲಿ ಸಿಎಎ, ಎನ್‍ಆರ್‍ಸಿ ಕಾಯಿದೆ ವಿರೋಧಿಸಿ ನಡೆದ ಬೃಹತ್ ಪ್ರತಿಭಟನೆಗೆ ಮುಸ್ಲಿಂ ಸಂಘಟನೆಗಳ ಜತೆ ಕಾಂಗ್ರೆಸ್, ಜೆಡಿಎಸ್, ದಲಿತಪರ, ಕೆಪಿಆರ್‍ಎಸ್, ಸಿಪಿಎಂ, ಭೀಮಸೇನೆ ಸೇರಿದಂತೆ ವಿವಿಧ ಸಂಘಟನೆಗಳು,ಜನಪ್ರತಿನಿಧಿಗಳು ಸಾಥ್ ನೀಡಿದರು.
ಸೋಮವಾರ ಪೌರತ್ವ ಕಾಯ್ದೆ ವಿರೋಧಿಸಿ ಕ್ಲಕ್ ಟವರ್, ಎಂಬಿ ರಸ್ತೆ, ಅಮ್ಮವಾರಿ ಪೇಟೆ ರಸ್ತೆಗಳಲ್ಲಿ ಅಘೋಷಿತ ಬಂದ್ ವಾತಾವರಣವಿತ್ತು, ಅಂಗಡಿ ಬಾಗಿಲುಗಳನ್ನು ಮುಚ್ಚಿ ಸಾವಿರಾರು ಮಂದಿ ಧರಣಿಯಲ್ಲಿ ಪಾಲ್ಗೊಂಡಿದ್ದರು. ರಸ್ತೆಯಲ್ಲಿ ಜನಸಂದಣಿ ಹೆಚ್ಚಾದ ಕಾರಣ ವಾಹನ ಸಂಚಾರ ಅಸ್ಥವ್ಯಸ್ತಗೊಂಡಿತು.
ನಗರದಲ್ಲಿನ ವಿವಿಧ ಬಡಾವಣೆಗಳಿಂದ ಅಮ್ಮವಾರಿ ಪೇಟೆತನಕ ಮೆರವಣಿಗೆ ನಡೆಸಿದ ಮುಸ್ಲಿಂ ಸಮುದಾಯದವರು ಶಕ್ತಿ ಪ್ರದರ್ಶನ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಅಲ್ಪಸಂಖ್ಯಾತರಮೇಲೆ
ಕೇಂದ್ರ ಗಧಾಪ್ರಹಾರ
ಅಮ್ಮವಾರಿ ಪೇಟೆ ವೃತ್ತದಲ್ಲಿ ನಡೆದ ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್‍ಕುಮಾರ್ ಮಾತನಾಡಿ, ಕೇಂದ್ರ ಸರ್ಕಾರ ಪ್ರತಿ ಹಂತದಲ್ಲೂ ಬಡವರ, ದಲಿತರ, ಅಲ್ಪಸಂಖ್ಯಾತರ ಮೇಲೆ ಗಧಾ ಪ್ರಹಾರ ನಡೆಸುತ್ತಿದೆ, ಸಾಧಕ ಬಾಧಕರಗಳ ಬಗ್ಗೆ ಚರ್ಚಿಸದೆ ಪೌರತ್ವ ಕಾಯ್ದೆ ತಿದ್ದುಪಡಿಗೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು.
ಸಂವಿಧಾನದ ಅಡಿಯಲ್ಲಿ ಜಾರಿಗೆ ತಂದಿರುವ ಕಾಯ್ದೆಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದ್ದು, ಅಂಬೇಡ್ಕರ್ ಅಶಯಗಳನ್ನು ಮಣ್ಣು ಪಾಲು ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದರು.
ದೇಶದಲ್ಲಿ ಪ್ರತಿಯೊಬ್ಬರೂ ಸಮಾನತೆಯಿಂದ ಜೀವನ ನಡೆಸಬೇಕು ಎಂಬುದು ಸಂವಿಧಾನ ಮೂಲ ಉದ್ದೇಶ, ಡಾ.ಬಿ.ಆರ್.ಅಂಬೇಡ್ಕರ್ ಅವರು ಒಂದೇ ದಿನದಲ್ಲಿ ಸಂವಿಧಾನವನ್ನು ರಚಿಸಿಲ್ಲ. ತಜ್ಞರೊಂದಿಗೆ ಚರ್ಚಿಸಿ ಮುಂದಿನ ಪಿಳೀಗೆಯ ಹಿತದೃಷ್ಟಿಯಿಂದ ಹಾಗೂ ಮುಂದಾಲೋಚನೆ ಇಟ್ಟುಕೊಂಡು ರಚನೆ ಮಾಡಿದ್ದಾರೆ, ಇದರ ಜ್ಞಾನ ಇಲ್ಲದವರು ಕಾಯ್ದೆಗಳನ್ನು ತಿದ್ದುಪಡಿ ಮಾಡುತ್ತಿದ್ದಾರೆ, ಈ ಹೋರಾಟದ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಅಗಬೇಕು ಎಂದು ಎಚ್ಚರಿಸಿದರು.
ಮುಸ್ಲಿಮರು ಎಂದೂ ಸಹ ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡಿಲ್ಲ, ಕಾಲಕಾಲಕ್ಕೆ ತಕ್ಕಂತೆ ಪ್ರತಿ ಧರ್ಮದವರು ಬದಲಾವಣೆಯಾಗುತ್ತಿದ್ದಾರೆ. ಜನ ವಿರೋಧಿ ಚಟುವಟಿಕೆಗಳ ವಿರುದ್ಧ ಹೋರಾಟ ನಡೆಸಿದರೆ ದೇಶ ದ್ರೋಹ ಪಟ್ಟ ಕಟ್ಟುತ್ತಾರೆ. ಪೌರತ್ವ ಕಾಯ್ದೆ ತಿದ್ದುಪಡಿ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದರು.
ಪ್ರಾಂತ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ, ಭಾರತ ದೇಶವು ಹಲವು ವೈವಿಧ್ಯತೆಗಳಿಂದ ಕೂಡಿದ್ದು ಸಂವಿಧಾನದ ಆಶಯಗಳಚಿತೆ ಬದುಕುವ ವಾತಾವರಣವನ್ನು ತರಬೇಕು ಜ್ಯಾತ್ಯತೀತ ರಾಷ್ಟ್ರದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶಗಳು ಇದ್ದು ಸಂವಿಧಾನವನ್ನು ಮತ್ತು ಅದರ ಆಶಯಗಳನ್ನು ಉಳಿಸಲು ಎಲ್ಲರೂ ಒಂದಾಗಬೇಕಾಗಿದೆ ಎಂದು ತಿಳಿಸಿದರು.
ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷೆ ವಿ.ಗೀತಾ, ಅಸ್ಸಾಂನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತಂದಾಗ ಬಹಳ ಹೋರಾಟಗಳು ನಡೆದವು, ಜತೆಗೆ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡರು, ದೇಶದಲ್ಲಿ ಬಿಜೆಪಿ ಪಕ್ಷಕ್ಕೆ ಬಹುಮತ ಇದೆ ಎಂಬ ಕಾಣರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿಷ್ ಷಾ ಹಿಟ್ಲರ್ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಟೀಕಿಸಿದರು.
ಪ್ರತಿಭಟನೆಯಲ್ಲಿ ಶಾಸಕರಾದ ಕೆ.ಆರ್.ರಮೇಶ್‍ಕುಮಾರ್, ಕೆ.ಶ್ರೀನಿವಾಸಗೌಡ, ಎಸ್.ಎನ್.ನಾರಾಯಣಸ್ವಾಮಿ, ಎಂಎಲ್ಸಿ ನಸೀರ್ ಅಹಮದ್, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಅಂಜುಮಾನ್ ಸಂಸ್ಥೆಯ ಅಧ್ಯಕ್ಷ ಜಮೀರ್ ಅಹಮದ್, ಮಾಜಿ ಶಾಸಕ ವರ್ತೂರು ಆರ್.ಪ್ರಕಾಶ್ ಮತ್ತಿತರರು ಪಾಲ್ಗೊಂಡಿದ್ದರು.
ಚಿತ್ರಶೀರ್ಷಿಕೆ:(ಫೋಟೊ-24ಕೋಲಾರ2):ಕೋಲಾರದಲ್ಲಿ ನಡೆದ ಪೌರತ್ವ ಕಾಯಿದೆ ವಿರೋಧಿ ಪ್ರತಿಭಟನೆಯಲ್ಲಿ ಬೃಹತ್ ಸಂಖ್ಯೆಯಲ್ಲಿ ಮುಸ್ಲೀಂ ಬಾಂಧವರು ಪಾಲ್ಗೊಂಡಿದ್ದು, ಶಾಸಕ ರಮೇಶ್‍ಕುಮಾರ್ ಮಾತನಾಡಿದರು.
ಚಿತ್ರಶೀರ್ಷಿಕೆ:(ಫೋಟೊ-24ಕೋಲಾರ3):ಕೋಲಾರದಲ್ಲಿ ನಡೆದ ಪೌರತ್ವ ಕಾಯಿದೆ ವಿರೋಧಿ ಪ್ರತಿಭಟನೆ ಹಿನ್ನಲೆಯಲ್ಲಿ ನಗರಾದ್ಯಂತ ಭಾರಿ ಕಟ್ಟೆಚ್ಚರ ವಹಿಸಲಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.