ಕೋಲಾರ: ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಐಸ್ಯುಲೇಷನ್ ಬೆಡ್‍ಗಳನ್ನು ಕಾಯ್ದಿರಿಸಿ – ಸಿ ಸತ್ಯಭಾಮ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ: ಜಿಲ್ಲೆಯ ಎಲ್ಲಾ ಆಸ್ಪತ್ರೆಗಳಲ್ಲಿ ಐಸ್ಯುಲೇಷನ್ ಬೆಡ್‍ಗಳನ್ನು ಕಾಯ್ದಿರಿಸಿ – ಸಿ ಸತ್ಯಭಾಮ

ಕೋಲಾರ: ಜಿಲ್ಲೆಯಲ್ಲಿರುವ ಎಲ್ಲಾ ಕ್ಲೀನಿಕ್‍ಗಳು ಸೇರಿದಂತೆ ಒಟ್ಟು 350 ಆಸ್ಪತ್ರೆಗಳಲ್ಲಿ ಐಸ್ಯುಲೇಷನ್ ಬೆಡ್‍ಗಳನ್ನು ಕಾಯ್ದಿರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಸಿ ಸತ್ಯಭಾಮ ಅವರು ತಿಳಿಸಿದರು

  ಇಂದು ಜಿಲ್ಲಾಧಿಕಾರಿಗಳ  ನ್ಯಾಯಾಂಗ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರೋನಾ ವೈರಸ್ ಕುರಿತಂತೆ ಹಮ್ಮಿಕೊಂಡಿದ್ದ ಜಾಗೃತಿ ಮೂಡಿಸುವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

  ಪ್ರತಿಯೊಂದು ಸಣ್ಣ ಕ್ಲಿನಿಕ್‍ನಲ್ಲಿ ಎರಡು ಬೆಡ್‍ಗಳನ್ನು ಹಾಗೂ ದೊಡ್ಡ ಆಸ್ಪತ್ರೆಗಳಲ್ಲಿ 5 ಬೆಡ್‍ಗಳನ್ನು ಕಾಯ್ದಿರಿಸಬೇಕು ಎಲ್ಲಾ ಮೆಡಿಕಲ್ ಸ್ಟೋರ್‍ಗಳಲ್ಲಿ ತ್ರಿಬಲ್ ಲೇಯರ್ ಮಾಸ್ಕ್‍ಗಳು ದೊರೆಯಬೇಕು. ವೆಂಟಿಲೇಟರ್‍ಗಳು ಸದಾ ಸಿದ್ಧವಾಗಿ ಇರಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಯಾವುದೇ ದಿನಗಳಲ್ಲಿ ವೈರಸ್ ಲಕ್ಷಣಗಳು ಕಂಡುಬಂದರೆ ಜಿಲ್ಲಾಧಿಕಾರಿಗಳಿಗೆ ಹಾಗೂ ಆರೋಗ್ಯಾಧಿಕಾರಿಗಳಿಗೆ ತಕ್ಷಣವೇ ತಿಳಿಸಬೇಕು ಆಸ್ಪತ್ರೆಗಳಲ್ಲಿ ಬೆಡ್‍ಗಳ ಜೊತೆ ಅಗತ್ಯ ಪರಿಕರಗಳು ಲಭ್ಯವಿರಬೇಕು. ಮಾಸ್ಕ್‍ಗಳನ್ನು ಅಧಿಕ ಬೆಲೆಗೆ ಮಾರುತ್ತಿರುವವರ ಬಗ್ಗೆ ದೂರುಗಳು ಹೆಚ್ಚಾಗಿ ಬರುತ್ತಿವೆ. ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ರೈಲ್ವೇ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್‍ಗಳನ್ನು ಮಾಡಬೇಕು. ಯಾರಾದರೂ ವಿದೇಶದಿಂದ ಬಂದಿದ್ದರೆ ಅಂತಹವರ ಬಗ್ಗೆ ಆರೋಗ್ಯಾಧಿಕಾರಿಗಳಿಗೆ ತಿಳಿಸಬೇಕು. ಜಿಲ್ಲೆಯಲ್ಲಿ ಯಾವುದೇ ಕರೋನಾ ಲಕ್ಷಣ ಕಂಡುಬಂದರೆ ಜಿಲ್ಲಾಧಿಕಾರಿಗಳಿಗೆ ಹಾಗೂ ಡಿಎಚ್‍ಒ ಅಧಿಕಾರಿಗಳಿಗೆ ತಕ್ಷಣವೇ ಮಾಹಿತಿ ನೀಡಬೇಕು. ರಾಜ್ಯದ ಸಹಾಯವಾಣಿ ಸಂಖ್ಯೆ 104 ಜಿಲ್ಲೆಯ ಸಹಾಯವಾಣಿ ಸಂಖ್ಯೆ 18004254325 ಕರೆ ಮಾಡಿ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾಕ್ಟರ್ ಚಾರಣಿ  ಅವರು ಮಾತನಾಡಿ ಕರೋನಾ ವೈರಸನ್ನು ಸಾಂಕ್ರಾಮಿಕ ಪಿಡುಗು ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದೆ. ಭಾರತದಾದ್ಯಂತ 60  ಪ್ರಕರಣಗಳು ಕಂಡುಬಂದಿದ್ದು, ಕರ್ನಾಟಕದಲ್ಲಿ 4 ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಯಾವುದೇ ಪ್ರಕರಣಗಳು ಕಂಡುಬಂದಿಲ್ಲ ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ 5 ಬೆಡ್‍ಗಳು ಕೆ.ಜಿ.ಎಫ್‍ನಲ್ಲಿ 8 ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ 2+2 ಬೆಡ್ ಗÀಳನ್ನು ಮೀಸಲಿಡಲಾಗಿದೆ ಎಂದು ತಿಳಿಸಿದರು

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ವಿಜಯ್ ಕುಮಾರ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ನಾರಾಯಣಸ್ವಾಮಿ ಸೇರಿದಂತೆ ಆರೋಗ್ಯ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.