ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ ಜಿ.ಪಂ.ನಿರ್ವಹಣಾಧಿಕಾರಿ ಸುದರ್ಶನ್, ಜಿ. ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಕೊರೊನಾ ನಿಯಂತ್ರಣಕ್ಕೆ ತಾಲ್ಲೂಕು ಆಡಳಿತದಿಂದ ಕೈಗೊಳ್ಳಲಾದ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.
ಶ್ರೀನಿವಾಸಪುರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಕೊರೊನಾ ನಿಯಂತ್ರಣಕ್ಕೆ ತಾಲ್ಲೂಕು ಆಡಳಿತದಿಂದ ಕೈಗೊಳ್ಳಲಾಗಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು.
ಕರ್ನಾಟಕ ಆಂಧ್ರಪ್ರದೇಶದ ಗಡಿಯಲ್ಲಿ ಸ್ಥಾಪಿಸಲಾಗಿರುವ ತಾಲ್ಲೂಕಿನ ತನಿಖಾ ಕೇಂದ್ರಕ್ಕೆ ಭೇಟಿ ನೀಡಿ ಪೊಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ಡಿವೈಎಸ್ಪಿ ನಾರಾಯಣಸ್ವಾಮಿ, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಪ್ರಕಾಶ್ ಇದ್ದರು.
ಶ್ರೀನಿವಾಸಪುರ: ಪಟ್ಟಣದಲ್ಲಿ ಅಗ್ನಿಶಾಮಕ ದಳ ಹಾಗೂ ಪುರಸಭೆ ವತಿಯಿಂದ ವೈರಾಣು ನಿರೋಧಕ ಔಷಧ ಸಿಂಪಡಣೆ ಮಾಡಲಾಯಿತು.
ಕೊರೊನಾ ವೈರಾಣು ಉಂಟುಮಾಡಿರುವ ಸಂಕಷ್ಟ ಪರಿಸ್ಥಿತಿಯನ್ನು ಎದುರಿಸಲು ಸಮಾಜದ ಎಲ್ಲ ವರ್ಗದ ಜನರೂ ಸಹಕರಿಸಬೇಕು. ಸ್ವಚ್ಛತೆ ಪಾಲಿಸಬೇಕು ಎಂದು ಪಟ್ಟಣದ ಅಗ್ನಿಶಾಮಕ ಠಾಣಾಧಿಕಾರಿ ಎಸ್.ಶಿವಕುಮಾರ್ ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಮಾತನಾಡಿ, ಪಟ್ಟಣದಲ್ಲಿ ಮೂರು ದಿನಗಳಿಂದ ವೈರಾಣು ನಿರೋಧಕ ಔಷಧ ಸಿಂಪಡಣೆ ಮಾಡಲಾಗುತ್ತಿದೆ. ಈ ಕಾರ್ಯವನ್ನು ಮುಂದುವರಿಸಲಾಗುವುದು ಎಂದು ಹೇಳಿದರು.
ಅಗ್ನಿಶಾಮಕ ದಳದ ಸಿಬ್ಬಂದಿ ಸಿ.ಕದಿರಪ್ಪ, ಎಚ್.ಶ್ರೀನಿವಾಸ, ಜಬಿವುಲ್ಲಾ ಖಾನ್, ಗೋವಿಂದರಾಜು ಸಿಂಪಡಣಾ ಕಾರ್ಯದಲ್ಲಿ ಭಾಗವಹಿಸಿದ್ದರು.