ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ, ಕೊರೊನಾ ವೈರಾಣು ಹರಡುವುದನ್ನು ತಡೆಯಲು ಪ್ರಕಟಿಸಲಾಗಿರುವ ಮಾರ್ಗ ಸೂಚಿಯನ್ನು ಉಲ್ಲಂಘಿಸುವವರವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು: ಎಂ.ಶ್ರೀನಿವಾಸ್
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪುರಸಭೆ ಅಧಿಕಾರಿಗಳು, ವ್ಯಾಪಾರಿಗಳು, ಮೌಲ್ವಿಗಳು ಹಾಗೂ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿ, ವ್ಯಾಪಾರಿಗಳು ತಮ್ಮ ಅಂಗಡಿ ಮುಂಗಟ್ಟಿನ ಮುಂದೆ, ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಎರಡು ಮೀಟರ್ ಅಂತರದಲ್ಲಿ ಗೆರೆ ಹಾಕಬೇಕು. ಯಾವುದೇ ಕಾರಣಕ್ಕೂ ನೂಕುನುಗ್ಗಲು ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ತಹಶೀಲ್ದಾರ್ ನೇತೃತ್ವದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್, ಪುರಸಭೆ ಮುಖ್ಯಾಧಿಕಾರಿ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿ ಒಳಗೊಂಡ ಕಾರ್ಯಪಡೆ ರಚಿಸಲಾಗಿದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ ರಾಘವೇಂದ್ರ ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ವಿ.ಮೋನಹನ್ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವಿಜಯ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಜಿಲ್ಲಾ ಕ್ಷಯರೋಗ ತಜ್ಞ ಡಾ. ಜಯರಾಂ, ಗುರುಪ್ರಸಾದ್ ಇದ್ದರು. ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ