ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಫಲಾನುಭವಿಗಳು ಸಮಯಕ್ಕೆ ಸರಿಯಾಗಿ ಸಾಲ ಮರು ಪಾವತಿ ಮಾಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್
ಶ್ರೀನಿವಾಸಪುರ: ತಾಲ್ಲೂಕಿನ ಮರಸನಪಲ್ಲಿ ಗ್ರಾಮದಲ್ಲಿ ಗುರುವಾರ ಡಿಸಿಸಿ ಬ್ಯಾಂಕ್ ವತಿಯಿಂದ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 58 ಸ್ತ್ರೀ ಶಕ್ತಿ ಸಂಘಗಳಿಗೆ ರೂ. 2.98ಕೋಟಿ ಸಾಲ ವಿತರಣೆ ಮಾಡಿ ಮಾತನಾಡಿ, ಗ್ರಾಮೀಣ ಹಾಗೂ ಪಟ್ಟಣ ಪ್ರದೇಶದ ಮಹಿಳೆಯರು ಸ್ವಾವಲಂಬಿ ಜೀವನ ನಡೆಸುವಂತೆ ಮಾಡಲು ಈ ಸಾಲ ನೀಡಲಾಗುತ್ತಿದೆ ಎಂದು ಹೇಳಿದರು.
ತಾಲ್ಲೂಕಿನಲ್ಲಿ 103 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಅಗತ್ಯ ಇರುವ ಎಲ್ಲ ಕಡೆ ಕೊಳವೆ ಬಾವಿ ನಿರ್ಮಿಸಿ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ನೀರಿನ ಸಮಸ್ಯೆ ತೀವ್ರವಾಗಿರುವ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಕ್ಷೇತ್ರದಲ್ಲಿ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
‘ತಾಲ್ಲೂಕಿನ ಕೆರೆಗಳಿಗೆ ಕೆಸಿ ವ್ಯಾಲಿ ನೀರು ಹರಿದು ಬರುತ್ತಿದೆ. ದಿಪಾವಳಿ ವೇಳೆಗೆ ತಾಲ್ಲೂಕಿನ ಎಲ್ಲ ಆಯ್ದ ಕೆರೆಗಳಿಗೂ ಕೆಸಿ ವ್ಯಾಲಿ ನೀರು ಹರಿದುಬರಲಿದೆ. ನನ್ನ ಜನಪರ ಕಾರ್ಯಗಳ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಈಗ ಯಾವುದೇ ಚುನಾವಣೆಯೂ ಇಲ್ಲ ಎಂದು ಹೇಳಿದರು. ರಾಯಲ್ಪಾಡ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರೆಡ್ಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತ, ಮುಖಂಡರಾದ ಎಚ್.ಆರ್.ಮೋಹನ್, ಸುಬ್ಬಿರೆಡ್ಡಿ, ಅಪ್ಪಿರೆಡ್ಡಿ, ಸತ್ಯನಾರಾಯಣ, ಎಂ.ಜಿ.ಶಂಕರಪ್ಪ, ಅಮೀರ್ ಜಾನ್, ರಹಮತ್ ಉಲ್ಲಾ, ವಲ್ಲೀಬಾಷ, ಶಂಕರಪ್ಪ, ಗೌರಮ್ಮ ನಾರಾಯಣಸ್ವಾಮಿ, ಸುಬ್ಬಾರೆಡ್ಡಿ ಇದ್ದರು.