ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಅಡುಗೆ ಸಹಯಕಿಯರಿಗೆ ತಕ್ಷಣ ಐದು ತಿಂಗಳ ಗೌರವಧನ ನೀಡುವಂತೆ ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ಮುಖ್ಯಮಮತ್ರಿಗಳಿಗೆ ಮನವಿ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ,ಆ.18: ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಅಡುಗೆ ಸಹಯಕಿಯರಿಗೆ ತಕ್ಷಣ ಐದು ತಿಂಗಳ ಗೌರವಧನ ನೀಡುವಂತೆ ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ವತಿಯಿಂದ ತಹಸೀಲ್ದಾರ್ ಮೂಲಕ ಮುಖ್ಯಮಮತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯಾಧ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರು ತಮ್ಮ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೀಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಕಳೆದ ಐದು ವರ್ಷಗಳಿಂದ ಗೌರವಧನ ನೀಡದೆ ಇರುವುದು ಬೇಸರದ ಸಂಗತಿಯಾಗಿದೆ. ಇನ್ನು ಲಾಕ್ ಡೌನ್ ಹಿನ್ನಲೆಯಲ್ಲಿ ಬೇರೆ ಕೆಲಸವಿಲ್ಲದೆ. ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಅಡುಗೆ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಸಹ ಗೌರವಧನ ನೀಡದೆ ಇರುವುದರಿಂದ ಅವರ ಜೀವನ ಅಸ್ತವ್ಯಸ್ಥವಾಗಿದೆ.
ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ಡಿ.ಗ್ರೂಪ್ ನೌಕರರ ಸಂಖ್ಯೆ ಕಡಿಮೆ ಇದ್ದು, ಕೆಲವು ಶಾಲೆಗಳಲ್ಲಿ ಡಿ.ಗ್ರೂಪ್ ನೌಕರರು, ಇಲ್ಲ. ಇಂತಹ ಸಂದಿಗ್ಧ ಪರಿಸದ್ಥಿತಿಯಲ್ಲಿ ಅಡುಗೆಯವರು ಹಾಗೂ ಅಡುಗೆ ಸಹಾಯಕರಾಗಿ ಅಡುಗೆ ಕೆಲಸದ ಜೊತೆಯಲ್ಲಿ ಶಾಲೆಯ ಸ್ವಚ್ಚತೆ ಮತ್ತು ಇತರೆ ಕೆಲಸ ಸಹ ಮಾಡುತಿರುವುದು ಸರ್ವೇ ಸಾಮಾನ್ಯವಾಗಿದೆ. ಹೀಗೆ ಶಾಲೆಗಳಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಅವರ ಸೇವೆಗೆ ತಕ್ಕ ಪ್ರತಿಫಲ ನೀಡಬೇಕಾಗಿರುವುದರಿಂದ ಈ ಕೂಡಲೇ ಕಳೆದ ಐದು ತಿಂಗಳ ಗೌರವಧನವನ್ನು ಏಕಕಾಲಕ್ಕೆ ಪಾವತಿಸಬೇಕೆಂದು ಸಮಿತಿಯು ಒತ್ತಾಯಿಸುತ್ತಿದೆ.
ನಿಯೋಗದಲ್ಲಿ ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ಜಿಲ್ಲಾಧ್ಯಕ್ಷ ಶಾಮೀರ್‍ಪಾಷ, ಪ್ರಧಾನ ಕಾರ್ಯದರ್ಶಿ ಸೈಯದ್ ಮುಜಾಹಿದ್, ಯಾಸೀನ್‍ಖಾನ್, ಸಮೀವುಲ್ಲಾ, ಖಾಜ ಮೊಯಿನುದ್ದೀನ್, ಪೈರೋಜ್‍ಖಾನ್, ಮುಬಾರಕ್ ದರ್ವೆಜ್ ಉಪಸ್ಥಿತರಿದ್ದರು.