ಕಸಬಾ ಸೊಸೈಟಿ ಆಶ್ರಯದಲ್ಲಿ ಡಿಸಿಸಿ ಬ್ಯಾಂಕ್ ಸಾಲ ವಿತರಣೆ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಕೋಲಾರ:- ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ವತಿಯಿಂದ ದಕ್ಷಿಣ ಕಸಬಾ ಸೊಸೈಟಿ ಆಶ್ರಯದಲ್ಲಿ ಮಹಿಳಾ ಸಂಘಗಳಿಗೆ 1.5 ಕೋಟಿ ರೂ ಸಾಲ ವಿತರಣೆ ಕಾರ್ಯಕ್ರಮವನ್ನು ಆ.29ರ ಶನಿವಾರ ಬೆಳಗ್ಗೆ 11-30 ಗಂಟೆಗೆ ತಾಲ್ಲೂಕಿನ ದೊಡ್ಡಹಸಾಳ ಗ್ರಾ.ಪಂ ಆವರಣದಲ್ಲಿ ಶಾಸಕ ಕೆ.ಶ್ರೀನಿವಾಸಗೌಡ ಉದ್ಘಾಟಿಸುವರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಬ್ಯಾಲಹಳ್ಳಿ ಗೋವಿಂದಗೌಡರು ವಹಿಸಲಿದ್ದು, ಬ್ಯಾಂಕಿನ ನಿರ್ದೇಶಕರಾದ ಎಂ.ಎಲ್.ಅನಿಲ್‍ಕುಮಾರ್, ನಾಗನಾಳಸೋಮಣ್ಣ, ಕೆ.ವಿ.ದಯಾನಂದ್, ಯಲವಾರಸೊಣ್ಣೆಗೌಡ, ವ್ಯವಸ್ಥಾಪಕ ನಿರ್ದೇಶಕ ರವಿ, ಕಸಬಾ ಎಸ್‍ಎಫ್‍ಸಿಎಸ್ ಅಧ್ಯಕ್ಷ ಚೋಳಘಟ್ಟ ಶ್ರೀನಿವಾಸ್ ಉಪಸ್ಥಿತರಿರುವರು ಎಂದು ಸೊಸೈಟಿ ಸಿಇಒ ವೆಂಕಟೇಶ್ ತಿಳಿಸಿದ್ದಾರೆ.