ಶ್ರೀನಿವಾಸಪುರ: ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರ ಧನವನ್ನು ಪಡೆಯುವ ಫಲಾನುಭವಿಗಳು ಉತ್ಪಾದನಾ ಚಟುವಟಿಕೆಯಲ್ಲಿ ತೊಡಗಿಸಬೇಕು.

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಿಂದ ಪರಿಹಾರ ಧನವನ್ನು ಪಡೆಯುವ ಫಲಾನುಭವಿಗಳು ಉತ್ಪಾದನಾ ಚಟುವಟಿಕೆಯಲ್ಲಿ ತೊಡಗಿಸಬೇಕು. ಎಂದು ತಹಶೀಲ್ದಾರ್ ಎಸ್‌.ಎಂ.ಶ್ರೀನಿವಾಸ್‌ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ಹಾಗೂ ಸ್ಕೊಡ್‌ವೆಸ್‌ ಸಂಸ್ಥೆ ವತಿಯಿಂದ ಹೆದ್ದಾರಿ ಬದಿ ವ್ಯಾಪಾರಿಗಳಿಗಾಗಿ ಏರ್ಪಡಿಸಿದ್ದ ಆದಾಯ ಉತ್ಪನ್ನ ಚಟುವಟಿಕೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಚಿಂತಾಮಣಿಯಿಂದ ಆಂಧ್ರಪ್ರದೇಶದ ಗಡಿಯ ವರೆಗಿನ ಅಂತರ ರಾಜ್ಯ ಹೆದ್ದಾರಿ ಬದಿಯಲ್ಲಿ ವ್ಯಾಪಾರ ಚಟುವಟಿಕೆ ನಡೆಸುತ್ತಿದ್ದ 143 ಫಲಾನುಭವಿಗಳಿಗೆ ತಲಾ ರೂ.1.86 ಲಕ್ಷ ಪರಿಹಾರ ಧನ ನೀಡಲಾಗುವುದು ಎಂದು ಹೇಳಿದರು.
ಫಲಾನುಭವಿಗಳಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳುವ ಬಗ್ಗೆ ತರಬೇತಿ ನೀಡಲಾಗುವುದು. ಸಂಪನ್ಮೂಲ ವ್ಯಕ್ತಿಗಳು ನೀಡುವ ಸಲಹೆ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ಹೇಳಿದರು.
ಕೆನರಾ ಬ್ಯಾಂಕ್‌ ಗ್ರಾಮೀಣ ಕೈಗಾರಿಕಾ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ರಮಾಕಾಂತ್‌ ಯಾದವ್‌ ಫಲಾನುಭವಿಗಳಿಗೆ ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳುವ ಕುರಿತು ತರಬೇತಿ ನೀಡಿದರು.
ಸಂಯೋಜಕ ಕೆ.ಈರಪ್ಪ, ನಿವೃತ್ತ ತಹಶೀಲ್ದಾರ್‌ ಶ್ರೀನಿವಾಸಶೆಟ್ಟಿ, ಜಯರಾಂ, ರವಿಕುಮಾರ್‌ ಇದ್ದರು.