ಶ್ರೀನಿವಾಸಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯದಲ್ಲಿ 192 ಕೆರೆಗಳ ಅಭಿವೃದ್ಧಿ :ಆನಂದ ಸುವರ್ಣ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರಾಜ್ಯದಲ್ಲಿ ಈವರೆಗೆ 192 ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ಹೇಳಿದರು.
  ಶೆಟ್ಟಿಹಳ್ಳಿ ಗ್ರಾಮದ ಸಮೀಪ ರೂ.17 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾದ ಕೆರೆಯನ್ನು ಶುಕ್ರವಾರ ಕೆರೆ ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿ ಮಾತನಾಡಿ, ಕೆರೆ ಅನ್ನದ ಬಟ್ಟಲಾಗಿದೆ ಹಾಗೂ ಅಂತರ್ಜಲ ವೃದ್ಧಿಗೆ ಪೂರಕವಾಗಿದೆ ಎಂದು ಹೇಳಿದರು.  ಜಿಲ್ಲೆಯಲ್ಲಿ 16 ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 16ಸಾವಿರ ಸ್ವ ಸಹಾಯ ಸಂಘಗಳನ್ನು ರಚಿಸಲಾಗಿದೆ. ಜನ ಜಾಗೃತಿ ವೇದಿಕೆ ಮೂಲಕ ಜನಾರೋಗ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. 480 ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಗಿದೆ. ಮದ್ಯ ವರ್ಜನ ಶಿಬಿರಗಳನ್ನು ಏರ್ಪಡಿಸಿ 1500 ಜನರನ್ನು ಮದ್ಯ ವ್ಯಸನದಿಂದ ಮುಕ್ತಗೊಳಿಸಲಾಗಿದೆ ಎಂದು ಹೇಳಿದರು.  .   ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್, ಜಿಲ್ಲಾ ಜನ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಲಕ್ಷ್ಮಣಗೌಡ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರೋಣೂರು ಚಂದ್ರಶೇಖರ್‌, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಕೆರೆಯಲ್ಲಿನ ಹೂಳು ತೆಗೆದು ಅಭಿವೃದ್ಧಿ ಪಡಿಸಿದ್ದಕ್ಕಾಗಿ ಕೃತಜ್ಞತೆ ಅರ್ಪಿಸಿದರು.  ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ದಿಂಬಾಲ ಆಶೋಕ್‌, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್‌.ವಿ.ಸುಧಾಕರ್‌, ತಾಲ್ಲೂಕು ರೈತ ಸಂಘದ ಅಧ್ಯಕ್ಷ ಶ್ರೀರಾಮರೆಡ್ಡಿ, ಮುಖಂಡರಾದ ಅಯ್ಯಪ್ಪ, ಮುನಿವೆಂಕಟಪ್ಪ, ತಿಮ್ಮರಾಯಪ್ಪ, ಅಶೋಕ್‌ ಕುಮಾರ್‌, ಶ್ರೀನಿವಾಸ್‌ ಇದ್ದರು.