ಶ್ರೀನಿವಾಸಪುರ, ಶಿಕ್ಷಣದ ವ್ಯಾಪಾರೀಕರಣ ನಿಲ್ಲಬೇಕು :ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ : ಶಿಕ್ಷಣದ ವ್ಯಾಪಾರೀಕರಣ ನಿಲ್ಲಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಹೇಳಿದರು.
  ಪಟ್ಟಣದ ಹೊರ ವಲಯದ ಕೆಂಪೇಗೌಡ ಬಡಾವಣೆಯಲ್ಲಿ ವಿಜಯಾದ್ರಿ ಎಜ್ಯುಕೇಷನಲ್‌ ಟ್ರಸ್ಟ್‌ ವತಿಯಿಂದ ಗುರುವಾರ ಏರ್ಪಡಿಸಿದ್ದ ವಿಜಯಾದ್ರಿ ವಿದ್ಯಾ ಸಂಸ್ಥೆಯನ್ನು ಉದ್ಘಾಟಿಸಿ ಮಾತನಾಡಿದರು.  ಜ್ಞಾನಾರ್ಜನೆ ಕಾರ್ಯದಲ್ಲಿ ಶಿಕ್ಷಕರು ಹಾಗೂ ಪೋಷಕರು ಮಕ್ಕಳನ್ನು ಪ್ರೋತ್ಸಾಹಿಸಬೇಕು. ಬದಲಾದ ಪರಿಸ್ಥಿತಿಯಲ್ಲಿ ಮಕ್ಕಳನ್ನು ಸತ್ಪ್ರಜೆಗಳನ್ನಾಗಿ ರೂಪಿಸುವುದು ಸವಾಲಿನ ಕೆಲಸವಾಗಿದೆ. ಆ ಕೆಲಸವನ್ನು ಶಿಕ್ಷಕರು ಸಮರ್ಥವಾಗಿ ನಿರ್ವಹಿಸಬೇಕು ಎಂದು ಹೇಳಿದರು.  ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಉಮಾದೇವಿ ಮಾತನಾಡಿ, ತಾಲ್ಲೂಕಿನಲ್ಲಿ ಉತ್ತಮ ಶೈಕ್ಷಣಿಕ ವಾತಾವರಣವಿದೆ. ಅದಕ್ಕೆ ಸಮರ್ಪಣಾ ಭಾವದಿಂದ ಕಾರ್ಯನಿರ್ವಹಿಸುವ ಶಿಕ್ಷಕ ಸಮುದಾಯ ಕಾರಣವಾಗಿದೆ. ಗುಣಾತ್ಮಕ ಫಲಿತಾಂಶ ಒಂದು ಶಿಕ್ಷಣ ಸಂಸ್ಥೆಯ ಸಾಧನೆಗೆ ಹಿಡಿದ ಕನ್ನಡಿಯಾಗಿರುತ್ತದೆ ಎಂದು ಹೇಳಿದರು.  ಈ ಸಂದರ್ಭದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.  ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಎಂ.ಜಯರಾಮರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ, ಸಂಸ್ಥೆಯ ಅಧ್ಯಕ್ಷ ಎ.ವೆಂಕಟರಾಮರೆಡ್ಡಿ, ಉಪಾಧ್ಯಕ್ಷ ಎನ್.ಮುರಳೀಧರ್‌, ಕಾರ್ಯದರ್ಶಿ ಎನ್‌.ಶಿವಕುಮಾರ್‌, ಖಜಾಂಚಿ ಬಿ.ಬಾಬಾಜಾನ್‌, ಕೈಗಾರಿಕಾ ಇಲಾಖೆ ಉಪ ನಿರ್ದೇಶಕ ಕೆ.ಎ.ರವಿಚಂದ್ರ, ಚಿದಾನಂದಗೌಡ, ಅಶ್ವತ್ಥನಾರಾಯಣಗೌಡ, ಗೋಪಾಲಕೃಷ್ಣ ಇದ್ದರು.