ಕೋಲಾರ : ಆಗ್ನೆಯ ಪದವಿಧರರ ಕ್ಷೇತ್ರದ ಚುಣಾವಣೆ ನಡೆಸಲು ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಜಿಲ್ಲಾ, ತಾಲ್ಲೂಕು ಮಟ್ಟಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ: ಸಿ . ಸತ್ಯಭಾಮ ಆದೇಶ

ವರದಿ : ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ : ಆಗ್ನೆಯ ಪದವಿಧರರ ಕ್ಷೇತ್ರದ ಚುನಾವಣೆ ಸಂಬಂಧ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಚುಣಾವಣೆ ನಡೆಸಲು ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿಗಳು ಹಾಗೂ ಆಗ್ನೆಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾದ ಸಿ . ಸತ್ಯಭಾಮ ಅವರು ಆದೇಶಿಸಿದ್ದಾರೆ . ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ( 9480870000 ) ನೋಡಲ್ ಅಧಿಕಾರಿಗಳಾಗಿರುತ್ತಾರೆ . ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳಾಗಿ ಕೋಲಾರ ತಾಲ್ಲೂಕಿಗೆ ಉಪನಿರ್ದೇಶಕರು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ( 7676125932 ) ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಕೋಲಾರ ( 9900199182 ) , ಮಾಲೂರು ತಾಲ್ಲೂಕಿಗೆ ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಪಂಚಾಯತ್ ಮಾಲೂರು ( 9663333250 ) ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಮಾಲೂರು ( 9482673641 ) , ಬಂಗಾರಪೇಟೆ ತಾಲ್ಲೂಕಿಗೆ ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಪಂಚಾಯತ್ ಬಂಗಾರಪೇಟೆ ( 9448155288 ) ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಬಂಗಾರಪೇಟೆ ( 7795647885 ) , ಕೆ.ಜಿ.ಎಫ್ ತಾಲ್ಲೂಕಿಗೆ ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಪಂಚಾಯತ್ ಕೆ.ಜಿ.ಎಫ್ ( 9739631382 ) ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಕೆ.ಜಿ.ಎಫ್ ( 9900902760 ) , ಮುಳಬಾಗಿಲು ತಾಲ್ಲೂಕಿಗೆ ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಪಂಚಾಯತ್ ಮುಳಬಾಗಿಲು ( 7975460292 ) ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಮುಳಬಾಗಿಲು ( 7975444435 ) , ಶ್ರೀನಿವಾಸಪುರ ತಾಲ್ಲೂಕಿಗೆ ಕಾರ್ಯನಿರ್ವಹಣಾಧಿಕಾರಿಗಳು ತಾಲ್ಲೂಕು ಪಂಚಾಯತ್ ಶ್ರೀನಿವಾಸಪುರ ( 9141419999 ) ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳು ಶ್ರೀನಿವಾಸಪುರ ( 9886699123 ), ಇವರನ್ನು ನೇಮಿಸಲಾಗಿದೆ . ಈ ಅಧಿಕಾರಿಗಳು ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೂ ಕೋವಿಡ್ ನಿಯಂತ್ರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಚುನಾವಣೆ ಪ್ರಕ್ರಿಯೆಯನ್ನು ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ .