ಕೇಂದ್ರ ಅಧ್ಯಯನ ತಂಡ ಬುಧವಾರ ತಾಲ್ಲೂಕಿಗೆ ಭೇಟಿ ನೀಡಿ ವಿವಿಧ ಯೋಜನೆಗಳಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗರಿಗಳ ಪ್ರಗತಿ ಪರಿಶೀಲನೆ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ : ಕೇಂದ್ರ ಅಧ್ಯಯನ ತಂಡ ಬುಧವಾರ ತಾಲ್ಲೂಕಿಗೆ  ಭೇಟಿ ನೀಡಿ  ವಿವಿಧ ಯೋಜನೆಗಳಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗರಿಗಳ ಪ್ರಗತಿ ಪರಿಶೀಲನೆ ನಡೆಸಿತು.
  ದೆಹಲಿಯಿಂದ ಆಗಮಿಸಿದ್ದ ಅಧ್ಯಯನ ತಂಡದ ನೇತೃತ್ವವನ್ನು ಮಹಾರಾಷ್ಟ್ರದ ಗಾಯಕ್‌ವಾಡ್‌ವಹಿಸಿದ್ದರು. ವಿನಾಯಕ ಘಾಡೆ ತಂಡದ ಉಪ ಮುಖ್ಯಸ್ಥರಾಗಿದ್ದರು.  ತಂಡದ ಸದಸ್ಯರು ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಿಗೆ ಭೇಟಿ ನೀಡಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ ಕೃಷಿ, ಸ್ವಚ್ಛ ಭಾರತ್‌ ಯೋಜನೆ ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿ, ಕಾಮಗಾರಿಗಳ ನಿರ್ವಹಣೆ ಕುರಿತು ತೃಪ್ತಿ ವ್ಯಕ್ತಪಡಿಸಿದರು.      ಸ್ವಚ್ಛ ಭಾರತ್ ಮಿಷನ್‌ ಸಂಯೋಜಕ ವಿಜಯ ಕುಮಾರ್‌, ರಾಷ್ಟ್ರೀಯ ಗ್ರಾಮೀಣ ನೈರ್ಮಲ್ಯ ಯೋಜನಾಧಿಕಾರಿ, ಸುಂದರೇಶ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್‌.ರವಿಕುಮಾರ್‌, ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್, ಸಹಾಯಕ ನಿರ್ದೇಶಕ ಕೆ.ರಾಮಪ್ಪ, ಸುರೇಶ್‌ ಇದ್ದರು