ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಗ್ರಾಮೀಣ ಭಾರತ ಬಂದ್‌ ನಡೆಸಲಾಗುವುದು

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ಧ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ನ.26ರಂದು  ಗ್ರಾಮೀಣ ಭಾರತ ಬಂದ್‌ ನಡೆಸಲಾಗುವುದು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಹೇಳಿದರು.
  ಪಟ್ಟಣದ ಕೆಪಿಆರ್ಎಸ್‌ ಕಚೇರಿ ಸಭಾಂಗಣದಲ್ಲಿ ಸೊಮವಾರ ಏರ್ಪಡಿಸಿದ್ದ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಭೂಮಿ, ವಿದ್ಯುತ್‌, ಎಪಿಎಂಸಿ, ಬೆಲೆ ನಿಯಂತ್ರಣ ಹಾಗೂ ಬೀಜ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಲಾಗಿದೆ. ನ.27 ರಂದು ಅಂಚೆ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.   ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌ ಮಾತನಾಡಿದರು.  ವಿವಿಧ ರೈತ ಸಂಘಟನೆಗಳ ಮುಖಂಡರಾದ ಎನ್‌.ವೀರಪ್ಪರೆಡ್ಡಿ, ಶ್ರೀರಾಮರೆಡ್ಡಿ, ನಂಜಪ್ಪ, ಮಂಜುನಾಥ್‌, ನಾಗಭೂಷಣ್‌, ಮಂಜುಳ ಇದ್ದರು.