ಕಾಯಕ ಜೀವಿಯಾಗಿದ್ದ ಅಂಬಿಗರ ಚೌಡಯ್ಯ ವಚನಗಳ ಮೂಲಕ ನೊಂದವರ ಬದುಕಿಗೆ ದಾರಿ ದೀಪವಾಗಿದ್ದಾರೆ : ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಕಾಯಕ ಜೀವಿಯಾಗಿದ್ದ ಅಂಬಿಗರ ಚೌಡಯ್ಯ ತಮ್ಮ ವಚನಗಳ ಮೂಲಕ ನೊಂದವರ ಬದುಕಿಗೆ ದಾರಿದೀಪವಾಗಿದ್ದಾರೆ ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು.
ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಸಮಾರಂಭದಲ್ಲಿ, ಚೌಡಯ್ಯನವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿ, ಯಾವುದೇ ವ್ಯಕ್ತಿಯನ್ನು ಹುಟ್ಟಿನಿಂದ ಅಳೆಯಬಾರದು. ಸಾಧನೆ ಮತ್ತು ಸಮಾಜ ಸೇವೆ ಒಬ್ಬ ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಏರಿಸುತ್ತದೆ ಎಂದು ಹೇಳಿದರು.
ಪುರಸಭೆ ಮಖ್ಯಾಧಿಕಾರಿ ವಿ.ಮೋಹನ್ ಕುಮಾರ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಗುರುಪ್ರಸಾದ್, ಶೇಖರ್‍ರೆಡ್ಡಿ, ತಾಲ್ಲೂಕು ಬೆಸ್ತರ ಸಂಘದ ಅಧ್ಯಕ್ಷ ಎಂ.ಎಸ್.ಕೋಟೇಶ್, ಮುಖಂಡರಾದ ಮುನಿರಾಜು, ನಾರಾಯಣಸ್ವಾಮಿ, ಶ್ರೀನಿವಾಸ್, ವೆಂಕಟರವಣಪ್ಪ, ಲೋಕೇಶ್, ವೆಂಕಟೇಶ್, ನಾಗೇಶ್ ಇದ್ದರು.