ಬಿಜೆಪಿ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಸಾಂಘಿಟಿತ ಪ್ರಯತ್ನ ನಡೆಸಬೇಕು; ಬಿ.ವೈ.ರಾಘವೇಂದ್ರ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಬಿಜೆಪಿ ಕಾರ್ಯಕರ್ತರು ಪಕ್ಷದ ಸಂಘಟನೆಗೆ ಸಾಂಘಿಟಿತ ಪ್ರಯತ್ನ ನಡೆಸಬೇಕು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಶುಕ್ರವಾರ ಪಟ್ಟಣಕ್ಕೆ ಆಗಮಿಸಿದ್ದ ಅವರು, ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಕೋಲಾರ ಜಿಲ್ಲೆ ನೀರಿನ ಕೊರತೆ ಎದುರಿಸುತ್ತಿದೆ. ಸಮಸ್ಯೆ ನಿವಾರಣೆಗೆ ಕೆ.ಸಿ.ವ್ಯಾಲಿ ನೀರನ್ನು ಕೆರೆಗಳಿಗೆ ಹರಿಸಲಾಗುತ್ತಿದೆ. ಆದರೆ ಆ ನೀರನ್ನು 3ನೇ
ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಮಾತನಾಡಿ, ಶ್ರೀನಿವಾಸಪುರ ತಾಲ್ಲೂಕು ಮಾವಿನ ಹಣ್ಣಿಗೆ ಪ್ರಸಿದ್ಧಿ ಪಡೆದಿದ್ದು, ಮಾವು ಸಂಸ್ಕರಣ ಘಟಕವೊಂದನ್ನು ಸ್ಥಾಪಿಸಬೇಕು. ಶೀತಲಗೃ ಹ ಸೌಲಭ್ಯ ನೀಡಬೇಕು. ರೈಲ್ವೆ ಕೋಚ್ ಕಾರ್ಖಾನೆ ಸ್ಥಾಪಿಸಬೇಕು ಎಂದು ಹೇಳಿದರು.
ತಾಲ್ಲೂಕು ಬಿಜೆಪಿ ಅಧ್ಯಕ್ಷ ಅಶೋಕ್ ರೆಡ್ಡಿ, ಮುಖಂಡರಾದ ಎಂ.ಲಕ್ಷ್ಮಣಗೌಡ, ಅಂಕುಶಂ ನಾರಾಯಣಸ್ವಾಮಿ, ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಮೂರ್ತಿ ಇದ್ದರು.
ಬಿ.ವೈ.ರಾಘವೇಂದ್ರ ಪಟ್ಟಣದಲ್ಲಿ ವಾಸವಾಗಿರುವ ತಮ್ಮ ಬಾಲ್ಯದ ಗೆಳೆಯ ಎಲ್‍ಐಸಿ ಅಭಿವೃದ್ಧಿ ಅಧಿಕಾರಿ ರವೀಂದ್ರಯ್ಯ ಕುಲಕರ್ಣಿ ಅವರ ಮನೆಗೆ ಭೇಟಿ ನೀಡಿ ಭೋಜನ ಸ್ವೀಕರಿಸಿದರು.