ಸಹಕಾರ ಸಂಘಗಳು ಪಕ್ಷಾತೀತವಾಗಿ ಬಡ್ಡಿ ರಹಿತ ಸಾಲ ಸೌಲಭ್ಯ ಕಲ್ಪಿಸಬೇಕು ;ಗೋವಿಂದಗೌಡ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಸಹಕಾರ ಸಂಘಗಳು ಪಕ್ಷಾತೀತವಾಗಿ ಬಡ್ಡಿ ರಹಿತ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.
ಪಟ್ಟಣದ ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ಯಲ್ದೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಫಲಾನುಭವಿಗಳಿಗೆ ಮಂಗಳವಾರ ರೂ.1.78 ಕೋಟಿ ಸಾಲದ ಮೊತ್ತದ ಚೆಕ್ ವಿತರಿಸಿ ಮಾತನಾಡಿ, ಪ್ರಾಮಾಣಿಕವಾಗಿ ಕೃಷಿ ಮಾಡುವ ರೈತರಿಗೆ ಸಂಖ್ಯೆಯ ಮಿತಿ ಇಲ್ಲದೆ ಬೆಳೆ ಸಾಲ ನೀಡಬೇಕು ಎಂದು ಹೇಳಿದರು.
ಸಹಕಾರ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಸಿಬ್ಬಂದಿ, ಗ್ರಾಹಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಠೇವಣಿ ಸಂಗ್ರಹ ಮಾಡಬೇಕು. ಸಹಕಾರ ಸಂಘದ ಆರ್ಥಿಕ ಶಕ್ತಿ ವೃದ್ಧಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಬೇಕು. ಯಲ್ದೂರು ಸಹಕಾರ ಸಂಘದಲ್ಲಿ ಸಾಲ ಮರುಪಾವತಿ ಮಾಡಲಾಗಿರುವ ಎಲ್ಲ ಫಲಾನುಭವಿಗಳಿಗು ಮರು ಸಾಲ ನೀಡಲಾಗುತ್ತಿದೆ ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗನಾಳ ಸೋಮಣ್ಣ ಮಾತನಾಡಿ, ತಾಲ್ಲೂಕಿನ ವಿವಿಧ ಸಮುದಾಯಗಳ ಫಲಾನುಭವಿಗಳಿಗೆ 5 ವರ್ಷದ ಅವಧಿಯಲ್ಲಿ ರೂ.100 ಕೋಟಿ ಬಡ್ಡಿ ರಹಿತ ಸಾಲ ನೀಡಲಾಗಿದೆ. ಅದರಲ್ಲೂ ಮಹಿಳಾ ಸಂಘಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪಕ್ಷ ಭೇದವಿಲ್ಲದೆ ಸಾಲ ಶೌಲಭ್ಯ ಸಾಲ ನೀಡಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ವಿ.ಸುಧಾಕರ್, ಎಂಎಸ್‍ಐಎಲ್ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕmರೆಡ್ಡಿ, ಯಲ್ದೂರು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ.ನಾರಾಯಣಸ್ವಾಮಿ, ಕಾರ್ಯದರ್ಶಿ ಎಂ.ಬಿ.ಪ್ರಭಾಕರರೆಡ್ಡಿ, ಸ್ಥಳೀಯ ಡಿಸಿಸಿ ಬ್ಯಾಂಕ್ ಶಾಖೆಯ ಪದಾಧಿಕಾರಿಗಳಾದ ಶಿವಾರೆಡ್ಡಿ, ಬಾನುಪ್ರಕಾಶ್, ಎಂ.ವೆಂಕಟಮುನಿಯಪ್ಪ, ಸಿ.ಎಚ್.ಶ್ರೀನಿವಾಸಗೌಡ, ಎಚ್.ಎಂ.ಕೃಷ್ಣೇಗೌಡ, ನಾಗರಾಜ್ ಇದ್ದರು
.