ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ವಿ.ಅಯ್ಯಪ್ಪ, ಉಪಾಧ್ಯರಾಗಿ ಶಾಂತಮ್ಮ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ; ಶ್ರೀನಿವಾಸಪುರ ಕಸಬಾ ರೇಷ್ಮೆ ಬೆಳೆಗಾರರ ಸೇವಾ ಸಹಕಾರ ಸಂಘದ ಅಧ್ಯಕ್ಷರಾಗಿ ವಿ.ಅಯ್ಯಪ್ಪ, ಉಪಾಧ್ಯರಾಗಿ ಶಾಂತಮ್ಮ ಅವಿರೋಧ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲು ಮಂಗಳವಾರ ಚುನಾವಣೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ವಿ.ಅಯ್ಯಪ್ಪ, ಶಾಂತಮ್ಮ ಹೊರತುಪಡಿಸಿ ಬೇರೆಯವರು ನಾಮಪತ್ರ ಸಲ್ಲಿಸದ ಪರಿಣಾಮವಾಗಿ ಅವರನ್ನು ಕ್ರಮವಾಗಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಲಾಯಿತು.
ಬಿ.ಆರ್.ಶಿವಶಂಕರ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಿಇಒ ಶಿವಾರೆಡ್ಡಿ, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಡಿಸಿಸಿ ಬ್ಯಾಂಕ್ ನಿರ್ದೇಶಕ ವೆಂಕಟರೆಡ್ಡಿ, ಸಂಘದ ನಿದೇಶಕರಾದ ಷಬ್ಬೀರ್ ಅಹ್ಮದ್, ಬಾಬುರೆಡ್ಡಿ, ಬೈರೆಡ್ಡಿ, ವೆಂಕಟರೆಡ್ಡಿ ಇದ್ದರು.