ಜಿಲ್ಲೆಯ ಪ್ರತಿ ಹಳ್ಳಿಹಳ್ಳಿಗೂ ಕನ್ನಡ ಸಾಹಿತ್ಯವನ್ನು ಪಸರಿಸುವ ಕೆಲಸ ಮಾಡುತ್ತೇನೆ. ಕನ್ನಡ ಸಾ. ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನದ ಅಕಾಂಕ್ಷಿ ಗೋಪಾಲಗೌಡ

ವರದಿ ; ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಕೋಲಾರ: ಜಿಲ್ಲೆಯ ಪ್ರತಿ ಹಳ್ಳಿಹಳ್ಳಿಗೂ ಕನ್ನಡ ಸಾಹಿತ್ಯವನ್ನು ಪಸರಿಸುವ ಕೆಲಸ ಮಾಡುತ್ತೇನೆ. ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಮತದಾರರು ನನಗೆ ಮತ ನೀಡುವ ಮೂಲಕ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧ್ಯಕ್ಷ ಸ್ಥಾನದ ಅಕಾಂಕ್ಷಿ ಗೋಪಾಲಗೌಡ ಕೋರಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಬುಧವಾರ ಚುನಾವಣಾಧಿಕಾರಿ ಅವರಿಗೆ ನಾಮ ಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿನ ಯುವ ಬರಹಗಾರರನ್ನು, ಕವಿಗಳನ್ನು, ಸಾಹಿತಿಗಳನ್ನು ಗುರುತಿಸಿ ಅವರಿಗೆ ಪೆÇ್ರೀತ್ಸಾಹಿಸುವ ಕೆಲಸ ಮಾಡುತ್ತೇನೆ.
ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ತನ್ನದೆ ಆದ ಸ್ಥಾನಮಾನ ಇದೆ. ನಾನು ಇಪ್ಪತ್ತು ವರ್ಷಗಳ ಕಾಲ ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿಕೊಂಡು ಬರುತ್ತಿದ್ದು, ಸಾಹಿತ್ಯ ಕ್ಷೇತ್ರದಲ್ಲೂ ಸೇವೆ ಸಲ್ಲಿಸಿದ್ದೇನೆ. ಈ ಭಾರಿ ಮತದಾರರು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡುತ್ತೇನೆ.
ಹಿಂದೆ ಅವಿಭಜಿತ ಕೋಲಾರ ಜಿಲ್ಲೆಯ ಕೈವಾರದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನವೂ 1984ರ ಮಾರ್ಚ್ 22,23 ಹಾಗೂ 24 ರಂದು ನಡೆದಿತ್ತು. ನನಗೆ ಅವಕಾಶ ಸಿಕ್ಕಿದರೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಯಾರ ವಿರುದ್ಧವೂ ಆರೋಪ ಮಾಡುವುದಿಲ್ಲ. ಸಾಹಿತ್ಯ ಪರಿಷತ್ ನಲ್ಲಿ ಆಗಿರುವ ಬೆಳವಣಿಗೆಗಳ ಬಗ್ಗೆ ಪ್ರತಿಯೊಬ್ಬರಿಗೂ ಗೊತ್ತಿರುವ ವಿಚಾರವೇ. ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿ ಕನ್ನಡ ಭವನ ನಿರ್ಮಿಸಲು ಜಿಲ್ಲಾಡಳಿತ, ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಸಮ್ಮೇಳನ, ತಾಲ್ಲೂಕು ಸಮ್ಮೇಳನಗಳ ಜೊತೆಗೆ ಜಿಲ್ಲೆಯ ಪ್ರತಿ ಹೋಬಳಿ ಘಟಕಗಳನ್ನು ರಚನೆ ಮಾಡಿ ಸಮ್ಮೇಳನ ನಡೆಸುತ್ತೆವೆ. ಜೊತೆಗೆ ಕನ್ನಡಪರ ಕಾರ್ಯಕ್ರಮಗಳನ್ನು ಹೆಚ್ಚು ಹೆಚ್ಚಾಗಿ ನಡೆಸಲು ಒತ್ತು ನೀಡುತ್ತೇನೆ. ಜಿಲ್ಲೆಯಲ್ಲಿನ ಹಿರಿಯ ಸಾಹಿತಿ, ಕವಿಗಳ ಮಾರ್ಗದರ್ಶನದಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದು ಕೋರಿದರು.
ಬಿ.ಎನ್.ಗೋಪಾಲ ಗೌಡ ನಾಮಪತ್ರ ಸಲ್ಲಿಸುವ ಮೊದಲು ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮ ಗಾಂಧಿ, ಕುವೆಂಪು, ಸರ್ವಜ್ಞರವರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ರಂಗಮಂದಿರದಿಂದ ತಾಲ್ಲೂಕು ಕಚೇರಿವರೆಗೆ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಸಿದರು.
ಮಾಲೂರು ಅಶ್ವಥ್ ರೆಡ್ಡಿ, ರಾಜಶಾಸ್ತ್ರ ಉಪನ್ಯಾಸಕ ಶಂಕರಪ್ಪ, ಎ.ವಿ.ರೆಡ್ಡಿ, ಪ್ರಹ್ಲಾದ ಗೌಡರು, ರಾಜ್ಯ ಪ್ರಶಸ್ತಿ ಪುರಸ್ಕøತ ನಾರಯಣ್ಣಪ, ಕಾಮ್ಸ್‍ನ ಅಧ್ಯಕ್ಷ ಸದಾನಂದ, ಜಗದೀಶ್, ಜಮೀರ್, ಕಾಡಗುರು ನಾಗಭೂಷಣ್, ಸಂಗಮೇಶ, ವೆಂಕಟರಾಮೇಗೌಡ, ಮುನಿವೆಂಕಟೇಗೌಡ, ಮುಳಬಾಗಿಲು ಭಾರತ್ ಕಾಫಿ ಶ್ರೀನಿವಾಸ್, ಮುನಿರಾಜು, ಶ್ರೀನಿವಾಸ ಗೌಡರು, ನಾರಾಯಣ್ ಪಿ ಯು ಕಾಲೇಜಿನ ಷರೀಫ್, ಸುಲೇಮಾನ್, ಲಕ್ಷ್ಮಣ ರೆಡ್ಡಿ, ಶಶಿಕುಮಾರ್ ಹಾಜರಿದ್ದರು.