ಗ್ರಾಮೀಣದವರು ಪ್ರಾ.ಆರೋಗ್ಯ ಕ್ಷೇಮ ಕೇಂದ್ರಗಳ ಪ್ರಯೋಜನ ಪಡೆದುಕೊಳ್ಳಬೇಕು; ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಗ್ರಾಮೀಣ ಪ್ರದೇಶದ ನಾಗರಿಕರು ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರಗಳ ಪ್ರಯೋಜನ ಪಡೆದುಕೊಳ್ಳಬೇಕು. ಆರೋಗ್ಯ ಸುಧಾರಣೆಗೆ ಆದ್ಯತೆ ನೀಡಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಆರೋಗ್ಯ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭಲ್ಲಿ ಪ್ರಾಥಮಿಕ ಆರೋಗ್ಯ ಕ್ಷೇಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಈ ಕೇಂದ್ರಗಳು ಜನರ ಪ್ರಾಥಮಿ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಪೂರಕವಾಗಿವೆ. ಇಲ್ಲಿನ ಆರೋಗ್ಯ ಸಿಬ್ಬಂದಿ ಗ್ರಾಮದ ಆರೋಗ್ಯ ರಕ್ಷಣೆಯ ಹೊಣೆ ಹೊತ್ತಿರುತ್ತದೆ ಎಂದು ಹೇಳಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಂ.ಸಿ.ವಿಜಯ, ಸಮಾಜ ಕಲ್ಯಾಣಾಧಿಕಾರಿ ರಾಮೇಗೌಡ, ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಗೋಪಾಲರೆಡ್ಡಿ, ಆನಂದ್, ಮುನೇಗೌಡ, ನಾರಾಯಣಗೌಡ, ಪ್ರಭಾಕರಗೌಡ, ಸುರೇಶ್ ಬಾಬು ಇದ್ದರು.