ಕರ್ನಾಟಕ ಲಾಕ್ ಡೌನ್ ನಲ್ಲಿ ನಾಳೆಯಿಂದ 14 ದಿವಸ ಎನು ಇರುತ್ತೆ? ಎನು ಇರಲ್ಲ!

JANANUDI.COM NETWORK

ಬೆಂಗಳೂರು, 26: ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮವಾಗಿ  ನಾಳೆಯಿಂದ 14 ದಿನಗಳ ಕಾಲ ರಾಜ್ಯದಲ್ಲಿ ಲಾಕ್ ಡೌನ್  ಜ್ಯಾರಿ ಮಾಡಲಾಗಿದೆ, ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಕೊರೊನಾ ಸೋಂಕು ನಿಯಂತ್ರಣಕ್ಕೆರಾಜ್ಯದಲ್ಲಿ ಮುಂದಿನ 2 ವಾರ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

  ಈ ಲಾಕ್ ಡೌನಿನಿಂದ ಕರ್ನಾಟಕದಲ್ಲಿ ನಾಳೆಯಿಂದ 14 ದಿನಗಳ ಕಾಲ ಬೆಳಿಗ್ಗೆ 6ರಿಂದ 10ಗಂಟೆವರೆಗೆ ಅಗತ್ಯ ವಸುಗಳ ಖರೀದಿಗೆ ಮಾತ್ರ ಅವಕಾಶ
* ಕೆ ಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸೇರಿದಂತೆ ಸಾರಿಗೆ ಸಂಚಾರ ಸಂಪೂರ್ಣ ಬಂದ್
* ಖಾಸಗಿ ವಾಹನ ಸಂಚಾರಕ್ಕೆ ನಿಷೇಧ
* ಗೂಡ್ಸ್ ಸರಕು ಸಾಗಾಟಕ್ಕೆ ಮಾತ್ರ ಅವಕಾಶ
* ಹೋಟೆಲ್ – ಪಾರ್ಸೆಲ್ ಗೆ ಮಾತ್ರ ಅವಕಾಶ
* ವೈನ್ ಶಾಪ್ಗಳು ಓಪನ್, ಆದರೆ ಪಾರ್ಸೆಲ್ ಗೆ ಅವಕಾಶ
* ಮೆಟ್ರೋ ಸೇವೆ ಸ್ಥಗಿತ
* ಬ್ಯಾಂಕಿಂಗ್ ಕ್ಷೇತ್ರಕ್ಕೆ ಅವಕಾಶ ನೀಡಲಾಗಿದೆ
* ಕೃಷಿ ಚಟುವಟಿಕೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ ಇದೆ
* 18-45 ವರ್ಷಗಳವರೆಗಿನವರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಲಸಿಕೆ ಕೊಡಲಾಗುವುದು
* ಚುನಾವಣೆಗಳನ್ನು ಮುಂದೂಡಲು ಶಿಫಾರಸು