ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೇ 6 ರಿಂದ ಎರಡು ದಿನ ಭಾರಿ ಮಳೆಯಾಗಲಿದೆ

JANANUDI.COM NETWORK

ಬೆಂಗಳೂರು, ಮೇ. 05: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮೇ 6 ರಿಂದ ಎರಡು ದಿನ ಭಾರಿ ಮಳೆಯಾಗಲಿದ್ದು, ಹವಮಾನ ಇಲಾಖೆ ಯೆಲ್ಲ್ಲೊ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಭಾರಿ ಮಳೆಯಾಗಲಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗದಲ್ಲಿಯೂ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.