ಆಂಜನೇಯಸ್ವಾಮಿ ದೇವಾಲಯದ ಧರ್ಮಾಧಿಕಾರಿ ಎಸ್.ಮಂಜುನಾಥ್ ನಿಧನ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ




ಶ್ರೀನಿವಾಸಪುರ: ತಾಲ್ಲೂಕಿನ ಎನಮರೇಪಲ್ಲಿ ಗ್ರಾಮದ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯದ ಧರ್ಮಾಧಿಕಾರಿ ಎಸ್.ಮಂಜುನಾಥ್ (46) ಬುಧವಾರ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಗ್ರಾಮದ ಹೊರ ವಲಯದ ಸ್ಮಶಾನದಲ್ಲಿ ಗುರುವಾರ ಅಂತ್ಯ ಸಂಸ್ಕಾರ ನಡೆಸಲಾಯಿತು.