ಭಾರತೀಯನೊಬ್ಬ ಸೆಗಣಿಯನ್ನು ಅಮೇರಿಕಕ್ಕೆ ತೆಗೆದುಕೊಂಡು ಹೋದ

JANANUDI.COM NETWORK


ಮೇ.11; ವಾಷಿಂಗ್ಟನ್ ಡಿಸಿಯ ಉಪನಗರದಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಭಾರತದ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಯು ಎಸ್ ಕಸ್ಟಮ್ಸ್ ಮತ್ತು ಬಾರ್ಡರ್ ಪ್ರೊಟೆಕ್ಷನ್ ಏಜೆಂಟರು ಭಾರತದ ಪ್ರಯಾಣಿಕರ ಲಗೇಜ್ ಬ್ಯಾಗ್ ನಲ್ಲಿ ಹಸುವಿನ ಸೆಗಣಿ ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಅಮೇರಿಕದಲ್ಲಿ ಹಸುವಿನ ಸಗಣಿಯಿಂದ ಯು ಎಸ್ ನಲ್ಲಿ ಸಾಂಕ್ರಾಮಿಕ ರೋಗ ಅಥವಾ ಕಾಲುಬಾಯಿರೋಗದ ಸಂಭಾವ್ಯ ವಾಹಕಗಳಾಗಿವೆ ಎಂದು ಅಲ್ಲಿ ಸೆಗಣಿಯನ್ನು ನಿಷೇಧಿಸಲಾಗಿದೆ
ಏರ್ ಇಂಡಿಯಾ ವಿಮಾನದ ಪ್ರಯಾಣಿಕ ಸಿಬಿಪಿಯ ತಪಾಸಣೆ ಕೇಂದ್ರಕ್ಕೆ ತಲುಪಿದ ನಂತರ ಸಿಬಿಪಿ ಕೃಷಿ ತಜ್ಞರು ಸೂಟ್ ಕೇಸ್ ನಲ್ಲಿ ಎರಡು ಹಸುವಿನ ಸಗಣಿ ಉಂಡೆಯನ್ನು ಕಂಡುಕೊಂಡಿದ್ದಾರೆ” ಎಂದು ಮಾಧ್ಯಮ ಪ್ರಕಟಣೆ ಸೋಮವಾರದಂದೆ ತಿಳಿಸಿದೆ.
“ಕಾಲುಬಾಯಿ ರೋಗವು ಜಾನುವಾರು ಮಾಲೀಕರು ಹೆಚ್ಚು ಭಯಪಡುವ, ಗಂಭೀರ ಕಾಯಿಲೆಗಳಲ್ಲಿ ಒಂದಾಗಿದ್ದು, ಈ ಘಟನೆ ಕಸ್ಟಮ್ಸ್ ಮತ್ತು ಗಡಿ ಸಂರಕ್ಷಣೆಯ ಕೃಷಿ ಸಂರಕ್ಷಣಾ ಕಾರ್ಯಾಚರಣೆಯ ಮಹತ್ವದ ಕಾರ್ಯಾಚರಣೆಯಾಗಿದೆ” ಎಂದು ಬಾಲ್ಟಿಮೋರ್ ಫೀಲ್ಡ್ ಆಫೀಸ್ ಸಿಬಿಪಿಯ ಕ್ಷೇತ್ರಕಾರ್ಯಾಚರಣೆಗಳ ನಿರ್ದೇಶಕ ಕೀತ್ ಫ್ಲೆಮಿಂಗ್ ತಿಳಿಸಿದ್ದಾರೆಂದು ತಿಳಿದುಬಂದಿದೆ.
ಯು.ಎಸ್. ಕೃಷಿ ಇಲಾಖೆಯ ಪ್ರಕಾರ, ಕಾಲುಬಾಯಿ ರೋಗವು ವಿಶ್ವಾದ್ಯಂತದ ಜಾನುವಾರುಗಳಿಗೆ ತೊಂದರೆ ತರುವ ರೋಗವಾಗಿದ್ದು ಇದು ವ್ಯಾಪಕವಾಗಿ ಮತ್ತು ವೇಗವಾಗಿ ಹರಡಬಹುದು ಮತ್ತು ಜಾನುವಾರುಗಳ ಸಂಖ್ಯೆಗೆ ಗಮನಾರ್ಹ ನಷ್ಟವನ್ನು ತರಬಲ್ಲದು. ಇದರಿಂದ ಜಾಗ್ರತರಾಗಿದ್ದರಿಂದ 1929ರಿಂದ ಯು ಎಸ್ ಎ ಕಾಲುಬಾಯಿ ರೋಗದಿಂದ ಮುಕ್ತವಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ
.