JANANUDI.COM NETWORK
ಕುಂದಾಪುರ,ಮೇ.14; ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆ ಹಾಗೂ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಶನಿವಾರ ಮುಂಜಾನೆಯಿಂದಲೇ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ನಿನ್ನೆ ರಾತ್ರಿಯಿಂದಲೇ ಮಂಗಳೂರಿನಲ್ಲಿ ಮಳೆ ಆರಂಭವಾಗಿದ್ದು, ಬೆಳಿಗ್ಗೆಯ ಜಾವ ಉಡುಪಿ ಜಿಲ್ಲೆಯಲ್ಲಿಯೂ ಭಾರಿ ಮಳೆ ಗಾಳಿ ಆರಂಭವಾಗಿದೆ. ಈ ಮಳೆ ಮೇ 16 – ೧೭ ರವರೆಗೆ ಮಳೆ ಆಗಲಿದೆ.
ಆದರಿಂದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ 3 ದಿನಗಳ ಕಾಲ ಮಲೆನಾಡು, ಕರಾವಳಿ, ಕೊಡಗು, ಬೆಂಗಳೂರಿನಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮೇ 16ರಂದು ಕರ್ನಾಟಕಕ್ಕೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.
. ಕರ್ನಾಟಕದಲ್ಲದೆ ಕೇರಳ, ತಮಿಳುನಾಡು ಸೇರಿ ದಕ್ಷಿಣ ಭಾರತದ ರಾಜ್ಯಗಳಲ್ಲಿ ಚಂಡಮಾರುತ ಅಬ್ಬರಿಸಲಿದೆ. ಹೀಗಾಗಿ, ಮುಂದಿನ 1 ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದಲ್ಲಿ ಮೇ 16ರಂದು ಗಂಟೆಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.
ಉಡುಪಿ ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಯಾಗಿದ್ದು, ಮರಗಳು ಉರುಳಿದ ಘಟನೆಗಳು ವರದಿಯಾಗಿವೆ. ಕುಂದಾಪುರ ಚರ್ಚಿನ ಆವರಣದಲ್ಲಿರುವ ಮರವೊಂದು ಬುಡ ಸಮೇತ ಉರುಳಿ ಬಿದ್ದಿದೆ. ಸಮೀದಲ್ಲೇ ಮೇರಿ ಮಾತೆಯ ಗ್ರೊಟ್ಟೊ ಇದ್ದು ಎನೊಂದು ಹಾನಿ ಆಗದ ಘಟನೆ ನಡೆದಿದೆ.
ಈಗ ಮಧ್ಯಾನ್ನ ಹೊತ್ತು ಕುಂದಾಪುರದಲ್ಲಿ ಬಹಳ ಜೋರಾದ ಮಳೆ ಬರುತ್ತಲಿದ್ದು,ಇದು ಇನ್ನೂ ಹೆಚ್ಚಾಗುವ ಸಂಬಂವ ಇದೆ.