ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯದಿಂದ ಶೈಕ್ಷಣಿಕ ಅಭಿವೃಧ್ಧಿ ಹೊಂದಿ ಗುಣ ಮಟ್ಟದ ಫಲಿತಾಂಶ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳಬೇಕು : ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಶೈಕ್ಷಣಿಕ ಅಭಿವೃಧ್ಧಿ ಹೊಂದಬೇಕು. ಗುಣ ಮಟ್ಟದ ಫಲಿತಾಂಶ ಪಡೆದು ಉತ್ತಮ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಮಗ್ರ ಕಲಿಕಾ ಯೋಜನೆಯಡಿ, ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟ್ಯಾಪ್ ವಿತರಿಸಿ ಮಾತನಾಡಿ, ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾಥಿಗಳು, ಖಾಸಗಿ ಸಂಸ್ಥೆಗಳ ವಿದ್ಯಾರ್ಥಿಗಳಿಗಿಂತ ಯಾವುದೇ ರೀತಿಯಲ್ಲಿ ಕಡಿಮೆಯಿಲ್ಲ. ಸರ್ಕಾರಿ ಕಾಲೇಜಿನಲ್ಲಿ ಓದುತ್ತಿರುವುದಕ್ಕೆ ಹೆಮ್ಮೆ ಪಡಬೇಕು. ಎರಡೂ ಕಡೆ ಒಂದೇ ಪಠ್ಯ ಬೋಧನೆ ಇರುವುದರಿಂದ ವಿದ್ಯಾರ್ಥಿಗಳು ಸರ್ಕಾರಿ ಶಾಲಾ ಕಾಲೇಜಿಗೆ ಸೇರಬೇಕು ಎಂದು ಹೇಳಿದರು.
ಕಾಲೇಜಿಗೆ ಕಾಂಪೌಂಡ್ ಹಾಗೂ ಮಹಾದ್ವಾರ ನಿರ್ಮಿಸಲಾಗುವುದು. ವಿದ್ಯಾರ್ಥಿಗಲ ಕಲಿಕೆಗೆ ಕೊರತೆ ಆಗದಂತೆ, ಅಗತ್ಯವಾದ ಎಲ್ಲ ಸೌಕರ್ಯ ಕಲ್ಪಿಸಲಾಗುವುದು ಎಂದು ಹೇಳಿದರು.
ಪ್ರಾಂಶುಪಾಲ ಪ್ರೊ. ಕೆ.ವಿ.ವೆಂಕಟೇಶ್, ಪ್ರಧ್ಯಾಪಕರಾದ ವೆಂಕಟರಾಮಯ್ಯ, ಮಂಜುನಾಥ್, ಪದ್ಮ, ಮುಖಂಡ ಕೆ.ಕೆ.ಮಂಜು, ತೊಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎಂ.ಶ್ರೀನಿವಾಸ್ ಇದ್ದರು
.