ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಕುಸ್ತಿಯಲ್ಲಿ ಮತ್ತೊಂದು ಪದಕ, ಬಜರಂಗ್ ಪುನಿಯಾಗೆ ಕಂಚಿನ ವಿಜಯ ಮಾಲೆ

JANANUDI.COM NETWORK

ಟೋಕಿಯೊ ಒಲಂಪಿಕ್ಸ್: ಭಾರತಕ್ಕೆ ಮತ್ತೊಂದು ಪದಕ, ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪುನಿಯಾ
65 ಕೆಜಿ ವಿಭಾಗದ ಫ್ರೀಸ್ಟೈಲ್ ಪಂದ್ಯದಲ್ಲಿ ಬಜರಂಗ್ ಪುನಿಯಾ ಕಜಕಿಸ್ತಾನದ ದೌಲತ್ ನಿಯಾಜ್ಬೆಕೋವ್ ವಿರುದ್ಧ8-0 ಅಂತರದ ಭರ್ಜರಿ ಗೆಲುವು ಸಾಧಿಸಿದರು.
ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಕುಸ್ತಿಯಲ್ಲಿ ಮತ್ತೊಂದು ಪದಕ ಒಲಿದಿದ್ದು, ಭಾರತ ಅಥ್ಲೀಟ್ ಬಜರಂಗ್ ಪುನಿಯಾ ಕಂಚಿನ ಪದಕ ಜಯಿಸಿದ್ದಾರೆ
ಇಂದು ನಡೆದ ಕಂಚಿನ ಪದಕಕ್ಕಾಗಿನ ಹೋರಾಟದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪೂನಿಯಾ, ಕಜಕಿಸ್ತಾನದ ದೌಲತ್ ನಿಯಾಜ್ಬೆಕೋವ್ ವಿರುದ್ಧ ಗೆಲುವು ದಾಖಲಿಸಿ ಕಂಚಿನ ಪದಕ ಸಾಧಿಸಿದ್ದಾರೆ.
65 ಕೆಜಿ ವಿಭಾಗದ ಫ್ರೀಸ್ಟೈಲ್ ಪಂದ್ಯದಲ್ಲಿ ಬಜರಂಗ್ ಪುನಿಯಾ ಕಜಕಿಸ್ತಾನದ ದೌಲತ್ ನಿಯಾಜ್ಬೆಕೋವ್ ವಿರುದ್ಧ8-0 ಅಂತರದ ಭರ್ಜರಿ ಗೆಲುವು ಸಾಧಿಸಿದರು. ಆ ಮೂಲಕ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದುಕೊಂಟ್ಟಿದ್ದಾರೆ. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾರ ಚಿನ್ನದ ಪದಕದ ಜೊತೆ ಭಾರತ ಒಟ್ಟು 7 ಪದಕ ದೊರಕಿದಂತಾಗಿದೆ.