ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : “ಆಟಿಡೊಂಜಿ ದಿನ”

ವರದಿ :  ವಾಲ್ಟರ್ ಮೊಂತೇರೊ, ಬೆಳ್ಮಣ್ಣು

ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ (ರಿ.) ಮತ್ತು ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ಸಭಾಂಗಣದಲ್ಲಿ ಆದಿತ್ಯವಾರ ‘ಆಟಿಡೊಂಜಿ ದಿನ” ಕಾರ್ಯಕ್ರಮ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷರಾದ ಬೋಳ ಉದಯ್ ಅಂಚನ್ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಜೇಸಿಐ ವಲಯ ಉಪಾಧ್ಯಕ್ಷ ಗಿರೀಶ್ ಎಸ್. ಪಿ. ಉದ್ಘಾಟಿಸಿದರು. ಕೆದಿಂಜೆ ಶ್ರೀ ವಿದ್ಯಾ ಬೋಧಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಯರಾದ ಪ್ರಥ್ವೀರಾಜ್ ಬಲ್ಲಾಳ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ನಿಕಟ ಪೂರ್ವಾಧ್ಯಕ್ಷರಾದ ಅಬ್ಬನಡ್ಕ ಸತೀಶ್ ಪೂಜಾರಿ ಸ್ವಾಗತಿಸಿದರು. ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿಯವರು ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ ವಂದಿಸಿದರು. ಕಾರ್ಯಕ್ರಮದ ನಿರ್ದೇಶಕಿ ಅಶ್ವಿನಿ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಪುಷ್ಪ ಕುಲಾಲ್ ವೇದಿಕೆಯಲ್ಲಿದ್ದರು.
ಕಾರ್ಯಕ್ರಮದಲ್ಲಿ ನಂದಳಿಕೆ ಗ್ರಾಮ ಪಂಚಾಯತ್ ಸದಸ್ಯೆ ಪದ್ಮಶ್ರೀ ಪೂಜಾರಿ, ಬೋಳ ಗ್ರಾಮ ಪಂಚಾಯತ್ ಸದಸ್ಯ ರಘುವೀರ್ ಶೆಟ್ಟಿ, ಪೂರ್ವಾಧ್ಯಕ್ಷರಾದ ದಿನೇಶ್ ಪೂಜಾರಿ, ಸುರೇಶ್ ಪೂಜಾರಿ, ಉಪಾಧ್ಯಕ್ಷ ಪ್ರಶಾಂತ್ ಪೂಜಾರಿ, ಜೊತೆ ಕಾರ್ಯದರ್ಶಿ ಹರಿಣಾಕ್ಷಿ ಪೂಜಾರಿ, ಕೋಶಾಧಿಕಾರಿ ವೀಣಾ ಪೂಜಾರಿ ಉಪಸ್ಥಿತರಿದ್ದರು.
ತುಳುನಾಡಿನ ಆಟಿ ತಿಂಗಳ 25ಕ್ಕೂ ಅಧಿಕ ಬಗೆಯ ತಿಂಡಿ-ತಿನಸುಗಳೊಂದಿಗೆ ಭೋಜನಕೂಟ ನಡೆಯಿತು.