ಎಸ್.ಎಸ್.ಎಲ್.ಸಿ ಫಲಿತಾಂಶ: ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಗೆ “ಎ” ಗ್ರೇಡ್

JANANUDI.COM NETWORK

ಕುಂದಾಪುರ ಅ 12 ಎಸ್ ಎಸ್ ಎಲ್ ಸಿ ಫಲಿತಾಂಶ ಸೋಮವಾರ ಪ್ರಕಟಗೊಂಡಿದ್ದು ಕುಂದಾಪುರ ಸಂತ ಜೋಸೆಫರ ಪ್ರೌಢಶಾಲೆಯು ಶಾಲಾವಾರು ಗುಣಮಟ್ಟದಲ್ಲಿ “ಎ” ಗ್ರೇಡ್ ಪಡೆದಿದೆ. ವಿದ್ಯಾರ್ಥಿಗಳಾದ ನಿಖಿತಾ ಶೇ 94.08 ಅಂಕ ಪಡೆದು ಪ್ರಥಮ ಸ್ಥಾನ ಪಡೆದರೆ, ಶ್ರದ್ಧಾ ಶೇ 92.20 ಅಂಕ ಪಡೆದು ದ್ವಿತೀಯ ಸ್ಥಾನ, ಅಸ್ಮಿತ ಶೇ 88 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಅಪೋಸ್ಟೋಲಿಕ್ ಕಾರ್ಮೆಲ್ ಸಂಸ್ಥೆ, ಶಾಲಾ ಮುಖ್ಯೋಪಾಧ್ಯಾಯಿನಿ ಹಾಗೂ ಶಿಕ್ಷಕ ಶಿಕ್ಷಕೇತರ ವೃಂದದವರು ಅಭಿನಂದಿಸಿದ್ದಾರೆ.