JANANUDI.COM NETWORK
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆ ಕಾಣುತ್ತಿರುವ ಸಂದರ್ಭದಲ್ಲಿ. 6 ರಿಂದ 8 ನೇ ತರಗತಿ ವರೆಗಿನ ಶಾಲಾರಂಭದ ಕುರಿತು ಚರ್ಚೆಗಳು ನಡೆಯುತ್ತಿದೆ. ಈ ನಡುವೆ ಸಪ್ಟೆಂಬರ್ 13ರಿಂದ ಶಾಲೆಗಳು ಆರಂಭ ಮಾಡುವಂತೆ ತಜ್ಞರ ಸಮಿತಿ ಸಲಹೆ ಕೊಟ್ಟಿದೆ
ಕೋವಿಡ್19 ರ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) 6 ರಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ದೈಹಿಕ ಅಥವಾ ಆಫ್ಲೈನ್ ತರಗತಿಗಳಿಗೆ ಶಾಲೆಗಳನ್ನು ಮತ್ತೆ ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ. ಈ ಹಿಂದೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಾಥಮಿಕ ವಿಭಾಗಗಳಿಗೆ ದೈಹಿಕ ತರಗತಿಗಳನ್ನು ಪುನಃ ತೆರೆಯುವ ನಿರ್ಧಾರವನ್ನು ಆಗಸ್ಟ್ ಅಂತ್ಯದ ವೇಳೆಗೆ ತೆಗೆದುಕೊಳ್ಳಲಾಗುವುದು ಎಂದು ಘೋಷಿಸಿದರು.
ಈಗ ತಜ್ಞರ ಸಮಿತಿ 1 ರಿಂದ 8ನೇ ತರಗತಿಯವರೆಗೆ ಆರಂಭಿಸುವ ಬದಲು ಮೊದಲ ಹಂತದಲ್ಲಿ 6 ರಿಂದ 8 ನೇ ತರಗತಿ ಹಾಗೂ ನಂತರದಲ್ಲಿ 1 ರಿಂದ 5ನೇ ತರಗತಿ ವರೆಗೆ ಆರಂಭ ಮಾಡುವಂತೆ ಸಲಹೆ ನೀಡಿದೆ.ಈಗಾಗಲೇ ಆಗಸ್ಟ್ 23 ರಿಂದ 9 ರಿಂದ 12 ರವರೆಗಿನ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ಕೊರೊನಾ ಮೂರನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಕೊರೊನಾ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಸೂಚಿಸಲಾಗಿದ್ದು. ಮಾರ್ಗಸೂಚಿಗಳ ಪ್ರಕಾರ ಶಾಲೆಗಳು ಒಂದು ಸಮಯದಲ್ಲಿ ಶೇಕಡಾ 50ರಷ್ಟು ವಿದ್ಯಾರ್ಥಿಗಳಿಗೆ ತರಗತಿಗೆ ಪಾಳಿ ಪದ್ದತಿಯಲ್ಲಿ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.