ಮೂಡುಬೆಳ್ಳೆಯ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

JANANUDI.COM NETWORK

ಮೂಡುಬೆಳ್ಳೆಯ: ಮೂಡುಬೆಳ್ಳೆಯ ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಪರಿಸರದಲ್ಲಿ ವಿವಿಧ ಹಣ್ಣುಗಳ ಗಿಡಗಳನ್ನು ಲಯನ್ಸ್ ಕ್ಲಬ್ ಮೂಡುಬೆಳ್ಳೆ ಇವರ ವತಿಯಿಂದ ನೆಡಲಾಯಿತು. ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲಯನ್ ವಲೇರಿಯನ್ ನೊರೊನ್ಹಾ, ಲಯನ್ ದೇವದಾಸ ಹೆಬ್ಬಾರ್ , ಎಲಿಯಾಸ್ ಲೋಬೋ ವಿವೇಕ ಫೈ‌, ಶಿಕ್ಷಕ ವೃಂದದವರು ಹಾಜರಿದ್ದರು. ಪ್ರಾಂಶುಪಾಲರಾದ ಎಡ್ವರ್ಡ್ ಲಾರ್ಸನ್ ಡಿಸೋಜ ಸ್ವಾಗತಿಸಿದರು ಪ್ರೌಢಶಾಲಾ ಹಿರಿಯ ಶಿಕ್ಷಕಿ ಸುನೀತಾ ಕಾಮತ್ ವಂದಿಸಿದರು.