ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು: ಕೆ.ಆರ್‌.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ : ಗ್ರಾಮ ಪಂಚಾಯಿತಿ ಅಧಿಕಾರಿಗಳು ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು ಎಂದು ಶಾಸಕ ಕೆ.ಆರ್‌.ರಮೇಶ್ ಕುಮಾರ್ ಹೇಳಿದರು . ತಾಲ್ಲೂಕಿನ ನಂಬಿಹಳ್ಳಿ ಗ್ರಾಮದಲ್ಲಿ ಗ್ರಾಮ ವಿಕಾಸ ಯೋಜನೆ ಅಡಿಯಲ್ಲಿ ಏರ್ಪಡಿಸಲಾಗಿದ್ದ ಗ್ರಾಮ ಸಭೆಯಲ್ಲಿ ರೂ . ೯೩ ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು , ರಸ್ತೆ , ಚರಂಡಿ , ಸಮುದಾಯ ಭವನ ನಿರ್ಮಾಣ ಕಾಮಗಾರಿಯ ಗುಣಮಟ್ಟ ಕೆಡಬಾರದು ಎಂದು ಎಚ್ಚರಿಸಿಕೆ ನೀಡಿದರು . ನಂಬಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ೧೩ ಗ್ರಾಮಗಳಿಗೆ ಅಗತ್ಯವಾದ ಮೂಲ ಸೌಕರ್ಯ ಕಲ್ಪಿಸಲಾಗುವುದು . ಅಗತ್ಯ ಇರುವ ಕಡೆಗಳಲ್ಲಿ ಶುದ್ಧ ಕುಡಿಯುವ ನೀರು ಘಟಕಗಳನ್ನು ಸ್ಥಾಪಿಸಲಾಗುವುದು . ಮನೆ ಇಲ್ಲದವರು ಅರ್ಜಿ ನೀಡಿದಲ್ಲಿ ನಿಗದಿತ ಅವಧಿಯಲ್ಲಿ ಮನೆ ನಿರ್ಮಿಸಿ ಕೊಡಲಾಗುವುದು ಎಂದು ಹೇಳಿದರು . ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹಪ್ಪ , ಅಭಿವೃದ್ಧಿ ಅಧಿಕಾರಿ ಮಂಜುನಾಥ್ , ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್ , ಮಾಜಿ ಅಧ್ಯಕ್ಷೆ ಪಾರ್ವತಮ್ಮ ಶ್ರೀರಾಮರೆಡ್ಡಿ , ಮುಖಂಡರಾದ ಅಯ್ಯಪ್ಪ , ಮುನಿವೆಂಕಟಪ್ಪ , ಗೋಪಾಲರೆಡ್ಡಿ , ಮಂಜುನಾಥರೆಡ್ಡಿ , ರೆಡ್ಡಪ್ಪ , ಚನ್ನೇಗೌಡ , ರಾಮಕೃಷ್ಣಾರೆಡ್ಡಿ , ವೆಂಕಟರಾಮರೆಡ್ಡಿ ಇದ್ದರು .