ಪ್ಲಾಸ್ಟಿಕ್ ಮುಕ್ತ ಮೂಡುಬೆಳ್ಳೆ ಕಾರ್ಯಕ್ರಮಕ್ಕೆ ಪ್ರಾಯೋಗಿಕ ಚಾಲನೆ

JANANUDI.COM NETWORK

ಬೆಳ್ಳೆ ಗ್ರಾಮ ಪಂಚಾಯತ್, ಸಂತ ಲಾರೆನ್ಸ್ ಸಮೂಹ ಶಿಕ್ಷಣ ಸಂಸ್ಥೆಗಳು, ಲಯನ್ಸ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಪರಿಸರ ಸಂಘ ಮೂಡುಬೆಳ್ಳೆ ಇವರ ಜಂಟಿ ಆಶ್ರಯದಲ್ಲಿ ಪ್ಲಾಸ್ಟಿಕ್ ಮುಕ್ತ ಮೂಡುಬೆಳ್ಳೆ ಕಾರ್ಯಕ್ರಮಕ್ಕೆ ಪ್ರಾಯೋಗಿಕ ಚಾಲನೆಯನ್ನು ಸಂತ ಲಾರೆನ್ಸ್ ಪದವಿಪೂರ್ವ ಕಾಲೇಜಿನಲ್ಲಿ ನೀಡಲಾಯಿತು ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಧಾಕರ್ ಪೂಜಾರಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ವಲೇರಿಯನ್ ನೊರೊನಾ ಎನ್ಎಸ್ಎಸ್ ಯೋಜನಾಧಿಕಾರಿ ಜಸಿಂತಾ ಲೋಬೋ , ಲಯನ್ಸ್ ಕ್ಲಬ್ಬಿನ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಮತ್ತು ಎಸ್ಎಲ್ಆರ್ ಎಂ ಘಟಕದ ಸಿಬ್ಬಂದಿಗಳು ಹಾಗು ವಿದ್ಯಾರ್ಥಿಗಳು ಹಾಜರಿದ್ದರು. ಸಂತ ಲಾರೆನ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಡ್ವರ್ಡ್ ಲಾಸನ್ ಡಿಸೋಜ ಸ್ವಾಗತಿಸಿ ಸಹ ಶಿಕ್ಷಕ ಜಾನ್ ಕ್ಯಾಸ್ಟಲಿನೋ ವಂದಿಸಿದರು.