ರಾಯಲ್ಪಾಡ್ ಸಮೀಪ ಶುಕ್ರವಾರ ರಾತ್ರಿ ಕಾರ್‍ನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯಬಂಧನ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ರಾಯಲ್ಪಾಡ್ ಸಮೀಪ ಶುಕ್ರವಾರ ರಾತ್ರಿ ಕಾರ್‍ನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ರಾಯಲ್ಪಾಡ್ ಗ್ರಾಮದಿಂದ ಮುದಿಮಡಗು ಗ್ರಾಮಕ್ಕೆ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಾರನ್ನು ತಡೆದು 103.680 ಲೀಟರ್ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು ಬಂಧಿಸಿ, ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಅಬಕಾರಿ ನಿರೀಕ್ಷಕ ಬಿ.ಎಸ್.ರೋಹಿತ್, ಅಬಕಾರಿ ಉಪ ನಿರೀಕ್ಷಕ ಕೆ.ಎಂ.ಕೃಷ್ಣಪ್ಪ, ಸಿಬ್ಬಂದಿ ಕೆ.ಆರ್.ಮಂಜುನಾಥ್, ರಾಘವೇಂದ್ರ ದಾಳಿಯಲ್ಲಿ ಭಾಗವಹಿಸಿದ್ದರು.