ಕುಂದಾಪುರದ ಹಿರಿಯ ಪತ್ರಕರ್ತ ಯು.ಎಸ್.ಶೆಣೈಯವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಪಿ.ಆರ್.ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದೆ.

JANANUDI.COM NET WORK

ಕಳೆದ ನಾಲ್ಕು ದಶಕಗಳಿಂದ ಪತ್ರಕರ್ತ ರಾಗಿ,ಸಮಾಜಸೇವಕರಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಕುಂದಾಪುರದ ಹಿರಿಯ ಪತ್ರಕರ್ತ ಯು.ಎಸ್.ಶೆಣೈಯವರಿಗೆ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಪಿ.ಆರ್.ರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದೆ.
ಶಿವಮೊಗ್ಗ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ, ಶಿವಮೊಗ್ಗ ದ ಕುವೆಂಪು ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗ್ರಹಸಚಿವ ಜ್ಞಾನೇಂದ್ರ,ಸಂಸದ ಬಿ.ವೈ.ರಾಘವೇಂದ್ರಸೇರಿದಂತೆ ಗಣ್ಯ ಅತಿಥಿಗಳು ಸನ್ಮಾನಿಸಿ ಪ್ರಶಸ್ತಿ ಪ್ರದಾನ ಮಾಡಿದರು
.