ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಿ: ನ್ಯಾಯಾಧೀಶ ಎಚ್.ಆರ್. ದೇವರಾಜ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ : ಜನರು ಮಾನಸಿಕ ಆರೋಗ್ಯ ರಕ್ಷಣೆಗೆ ಮೊದಲು ಆದ್ಯತೆ ನೀಡಬೇಕು ಎಂದು ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ಆರ್.ದೇವರಾಜ್ ಹೇಳಿದರು . ತಾಲ್ಲೂಕಿನ ಗೌನಿಪಲ್ಲಿ ಗ್ರಾಮದದಲ್ಲಿ ಕಾನೂನು ಸೇವಾ ಪ್ರಾಧಿಕಾರ ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದ ಭಾನುವಾರ ಏರ್ಪಡಿಸಿದ್ದ ಮಾನಸಿಕ ಆರೋಗ್ಯ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು , ಜನರು ಬೇರೆ ಬೇರೆ ಕಾರಣಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ . ಅದು ಕೆಲವು ಸಲ ಅಪಾಯಕಾರಿ ಆಗುವ ಸಂಭವ ಇರುತ್ತದೆ ಎಂದು ಹೇಳಿದರು . ಮನುಷ್ಯ ಮಾನಸಿಕ ಸಮತೋಲನ ಕಾಪಾಡಿಕೊಳ್ಳಬೇಕು . ಖಿನ್ನತೆಯ ಲಕ್ಷಣಗಳು ಕಂಡುಬಂದಲ್ಲಿ ಮನೋವೈದ್ಯರ ಸಲಹೆ ಪಡೆಯಬೇಕು ಎಂದು ಹೇಳಿದರು . ಅಪರ ಸಿವಿಲ್ ನ್ಯಾಯಾಧೀಶ ನಾಗೇಶ್ ನಾಯಕ್ , ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರುಣ ರವಿಕುಮಾರ್‌ , ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್‌ ಸಿ.ರವಿಕುಮಾರ್ ಪಿಡಿಒ ಶಂಕರಪ್ಪ ಇದ್ದರು .