ತಾಲ್ಲೂಕಿನಲ್ಲಿ ಗ್ರಾಮೀಣ ರಸ್ತೆಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ. ಕೆ.ಆರ್.ರಮೇಶ್ ಕುಮಾರ್

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನಲ್ಲಿ ಗ್ರಾಮೀಣ ರಸ್ತೆಗಳ ನಿರ್ಮಾಣ ಹಾಗೂ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗಿದೆ. ರಸ್ತೆ ನಿರ್ಮಾಣದಿಂದ ಗ್ರಾಮೀಣ ಪ್ರದೇಶದ ನಾಗರಿಕರ ದೈನಂದಿನ ವ್ಯವಹಾರ ಸುಲಭವಾಗುತ್ತದೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಚಲ್ಲಿಗಾನಹಳ್ಳಿ ಗೇಟ್ ಸಮೀಪ ಕೋಲಾರ ರಸ್ತೆಯಿಂದ ಹೆಬ್ಬಟ ಮಾರ್ಗವಾಗಿ ಹಾದುಹೋಗುವ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, 2.91 ಕಿ.ಮೀ ಉದ್ದದ ರಸ್ತೆಯನ್ನು ರೂ.1 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈ ರಸ್ತೆ ನಿರ್ಮಾಣದಿಂದ ಹಲವು ಗ್ರಾಮಗಳ ನಾಗರಿಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸನ್, ಪಿಎಲ್‍ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಕೋಚಿಮುಲ್ ಮಾಜಿ ಅಧ್ಯಕ್ಷ ಎನ್.ಜಿ.ಬೇಟಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ಮುಖಂಡರಾದ ಮುನಿವೆಂಕಟಪ್ಪ, ಪಾಳ್ಯ ಗೋಪಾಲರೆಡ್ಡಿ, ಸಂಪತ್ ಕುಮಾರ್, ಗ್ರಾಮ ಪಂಚಾಯಿತಿ ಸದಸ್ಯ ಆನಂದ್, ಗುತ್ತಿಗೆದಾರ ರಾಜಣ್ಣ, ದರ್ಶನ್, ಪ್ರಕಾಶ್, ಎಂಜಿನಿಯರ್‍ಗಳಾದ ನಾರಾಯಣಸ್ವಾಮಿ, ಅನ್ವರ್, ಪಟೇಲ್ ನಾರಾಯಣಸ್ವಾಮಿ, ನರಸಿಂಹಮೂರ್ತಿ ಶಿವಕುಮಾರ್ ಇದ್ದರು.