ನಟ ಸುಶಾಂತ್​ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ ನಿಧನ, 4 ಜನರ ಸ್ಥಿತಿ ಗಂಭೀರ

JANANUDI.COM NETWORK

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರ ಕುಟುಂಬದ 6 ಮಂದಿ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ ಮಂಗಳವಾರ ನ.16 ರ ಬೆಳಗ್ಗೆ ಈ ಭೀಕರ ಆ್ಯಕ್ಸಿಡೆಂಟ್​ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡಿರುವ 4 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಿಹಾರದ ಲಖಿಸರಾಯ್​ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 333 ರಲ್ಲಿ ಈ ಅಪಘಾತ ಸಂಭವಿಸಿದ್ದು. ಸುಶಾಂತ್​ ಕುಟುಂಬದವರು ಸೇರಿ ಒಟ್ಟು ೧೦ ಮಂದಿ ಪ್ರಯಾಣಿಸಿದ್ದ ಕಾರು ಮತ್ತು ಟ್ರಕ್​​ ನಡುವೆ ನಡೆದ ಅಪಘಾತದ ಪರಿಣಾಮ ಸ್ಥಳದಲ್ಲೇ ೬ ಮಂದಿ ಮೃತಪಟ್ಟಿದ್ದಾರೆ.
ವಾಹನದಲ್ಲಿದ್ದವರು ಕುಟುಂಬಸ್ಥರೊಬ್ಬರ ಅಂತ್ಯಸಂಸ್ಕಾರ ಮುಗಿಸಿ ಬರುತ್ತಿರುವಾಗ ಈ ಅಪಘಾತ ಸಂಭವಿಸಿದ್ದು 6 ಮಂದಿಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಬಾಲಮುಕುಂದ್​ ಸಿಂಗ್​ ಮತ್ತು ದಿಲ್​ ಖುಷ್​ ಸಿಂಗ್​ ಅವರನ್ನು ಪಾಟ್ನಾಗೆ ಕಳಿಸಿ ಹೆಚ್ಚುವರಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನಿಬ್ಬರಿಗೆ ಲಖಿಸರಾಯ್​ ಜಿಲ್ಲಾ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ. ಮೃತರನ್ನು ಬಾಬಿ ದೇವಿ, ಅನಿತಾ ದೇವಿ, ಲಾಲ್​ಜಿತ್​ ಸಿಂಗ್, ಅಮಿತ್​ ಶೇಖರ್​, ರಾಮಚಂದ್ರ ಸಿಂಗ್​ ಹಾಗೂ ಚಾಲಕ ಪ್ರೀತಂ ಎಂದು ಗುರುತಿಸಲಾಗಿದೆ.