ಕೆದಿಂಜೆ : ಪ್ರಥಮ ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆ

ವರದಿ:  ವಾಲ್ಟರ್  ಮೊಂತೇರೊ, ಬೆಳ್ಮಣ್ಣು

ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ನೆಹರು ಯುವ ಕೇಂದ್ರ ಉಡುಪಿ, ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಹಾಗೂ ಹಳೆ ವಿದ್ಯಾರ್ಥಿ ಸಂಘ ಕೆದಿಂಜೆ ಇದರ ಸಹಯೋಗದಲ್ಲಿ ಕೆದಿಂಜೆ ಸಭಾಂಗಣದಲ್ಲಿ ಭಾರತದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆ ಕಾರ್ಯಕ್ರಮ ಜರಗಿತು.
ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಶಾಲಾ ನಾಯಕ ಪ್ರೇರಣ್ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪರ್ಚನೆ ಸಲ್ಲಿಸಿದರು.
ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಪ್ರಥ್ವೀರಾಜ್ ಬಲ್ಲಾಳ್, ಸಹಶಿಕ್ಷಕಿ ರೇಖಾ ಪೈ, ಕೆದಿಂಜೆ ಶಾಲಾ ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಬೀರೊಟ್ಟು ದಿನೇಶ್ ಪೂಜಾರಿ, ಶಾಲಾ ಗೌರವ ಶಿಕ್ಷಕಿಯರಾದ ಮಮತಾ ಜೆ., ಜಯಲಕ್ಷಿö್ಮÃ, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‌ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಪೂರ್ವಾಧ್ಯಕ್ಷ ರಾಜೇಶ್ ಕೋಟ್ಯಾನ್, ಕಾರ್ಯದರ್ಶಿ ಸುರೇಶ್ ಪೂಜಾರಿ ಕಾಸ್ರಬೈಲು, ಅಂತರಿಕ ಲೆಕ್ಕಪರಿಶೋಧಕ ಅಬ್ಬನಡ್ಕ ಹರಿಪ್ರಸಾದ್ ಆಚಾರ್ಯ, ಜೊತೆ ಕಾರ್ಯದರ್ಶಿ ಪುಷ್ಪ ಕುಲಾಲ್, ಕೋಶಾಧಿಕಾರಿ ವೀಣಾ ಪೂಜಾರಿ, ಮಹಿಳಾ ಸಂಘಟನಾ ಕಾರ್ಯದರ್ಶಿ ಸಂಧ್ಯಾ ಶೆಟ್ಟಿ, ಭಜನಾ ಮಂಡಳಿ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಸದಸ್ಯರಾದ ಆರತಿ ಕುಮಾರಿ, ಅಶ್ವಿನಿ ಪ್ರಭಾಕರ್, ಪದ್ಮಶ್ರೀ ಪೂಜಾರಿ, ಹರೀಶ್ ಪೂಜಾರಿ, ಶರತ್ ದೇವಾಡಿಗ, ಕೀರ್ತನ್ ಕುಮಾರ್, ಪ್ರಶಾಂತ್ ಬೋಳ ಮೊದಲಾದವರಿದ್ದರು.