ನಾಳೆ ಕೋಟೇಶ್ವರ ಗಾಣಿಗ ಯುವ ಸಂಘಟನೆಯ ದಶಮಾನೋತ್ಸವ ಸಮಾರೋಪ

JANANUDI.COM NETWORK


ಕೋಟೇಶ್ವರ: ಕೋಟೇಶ್ವರ ಗಾಣಿಗ ಯುವ ಸಂಘಟನೆಯ ದಶಮಾನೋತ್ಸವದ ಸಮಾರೋಪ ಸಮಾರಂಭ ಡಿ.5ರಂದು ಭಾನುವಾರ ಮಧ್ಯಾಹ್ನ 2.30ಕ್ಕೆ ಕುಂದಾಪುರ ವ್ಯಾಸರಾಜ ಕಲ್ಯಾಣಪದಲ್ಲಿ ನಡೆಯಲಿದೆ.
ಇದೇ ಸಂದರ್ಭದಲ್ಲಿ ದಶಮಾನೋತ್ಸವದ ಪ್ರಯುಕ್ತ ಜರುಗಿದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. ಅಲ್ಲದೇ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದಿಂದ ಪ್ರತಿಭಾ ಪುರಸ್ಕøರ ಹಾಗೂ ಸಾಧಕರಿಗೆ ಸನ್ಮಾನ ಜರುಗಲಿದೆ.ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿಜೇತರು ಈ ಕಾರ್ಯಕ್ರಮದಲ್ಲಿ ಕಡ್ಡಾಯವಾಗಿ ಭಾಗವಹಿಸಿ ತಮ್ಮ ಬಹುಮಾನವನ್ನು ಪಡೆಯಬೇಕೆಂದು
ಗಾಣಿಗ ಯುವ ಸಂಘಟನೆ ಕೋಟೇಶ್ವರ ಘಟಕದ ಅಧ್ಯಕ್ಷ ಅಭಿಲಾಷ ಬಿ.ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.