ಒಮಿಕ್ರಾನ್ ತಡೆಗೆ ಕಠಿಣ ಕ್ರಮ: ಶಾಲಾ-ಕಾಲೇಜುಗಳಲ್ಲಿ ಸಭೆ ಸಮಾರಂಭ ತಡೆ ಹಲವು ಕಠಿಣ ಕ್ರಮ ಜಾರಿ

JANANUDI.COM NETWORK


ರಾಜ್ಯದಲ್ಲಿ ಕೊರೊನಾ ಸೋಂಕಿನ ಹೊಸ ರೂಪಾಂತರಿ ಓಮಿಕ್ರಾನ್ ತಡೆಗೆ ಮುಂದಾಗಿರುವ ರಾಜ್ಯ ಸರ್ಕಾರ, ಕೊರೊನಾ ಸೋಂಕು ಪತ್ತೆ ಪರೀಕ್ಷೆ ಹೆಚ್ಚಳ, ವಿಮಾನ ನಿಲ್ದಾಣಗಳಲ್ಲಿ ಬಿಗಿ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ಕಠಿಣ ಕ್ರಮ ಜಾರಿ ಮಾಡಲು ನಿರ್ಧರಿಸಿದೆ.
ಮುದುವೆ ಮತ್ತು ವಿವಿಧ ಸಮಾರಂಭಗಳಿಗೆ 500 ಮಂದಿಗೆ ಪಾಲ್ಗೊಳ್ಳಲು ಅವಕಾಶ,
ಚಿತ್ರಮಂದಿರ ಮತ್ತು ಮಾಲ್ ಗಳಿಗೆ ತೆರಳುವ ಮಂದಿಗೆ ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರುವುದು ಹಾಗು ಶಾಲೆಗಗಳಿಗ ಮಕ್ಕಳನ್ನು ಬಿಡಲು ತೆರಳುವ ಪೆÇೀಷಕರು ಎರಡು ಡೋಸ್ ಲಸಿಕೆ ಪಡೆದಿರಬೇಕು ಎನ್ನುವ ನಿಯಮ ಜಾರಿ ಮಾಡಿದೆ.
ರಾಜ್ಯದಲ್ಲಿ ಕೋವಿಡ್ -19 ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವರು, ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆಯ ಬಳಿಕ ಮಾಹಿತಿ ನೀಡಿದ ಆರ್. ಅಶೋಕ, ಜಗತ್ತಿನ ವಿವಿಧ ಭಾಗಗಳಲ್ಲಿ 400 ಒಮಿಕ್ರಾನ್ ಸೋಂಕು ಪ್ರಕರಣಗಳು ಕಂಡು ಬಂದಿವೆ. ಆದರೆ, ಇವು ತೀವ್ರತರದ ಸ್ವರೂಪದ್ದು ಅಲ್ಲ ಎನ್ನುವ ವಿಷಯವನ್ನು ತಜ್ಞರು ತಿಳಿಸಿದ್ದಾರೆ. ಆದರೂ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದರು.
ಸೋಂಕು ತಡೆಗೆ ಬಿಗಿ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.ಒಮಿಕ್ರಾನ್ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಚಿತ್ರಮಂದಿರ, ಮಾಲ್‍ಗಳಲ್ಲಿ, ಮಕ್ಕಳನ್ನು ಶಾಲೆಗೆ ಬಿಡಲು ತೆರಳುವ ಪೆÇೀಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು. ಇಲ್ಲದಿದ್ದರೆ ಅಂತವರಿಗೆ ಅವಕಾಶ ಮಾಡಿಕೊಡದಿರುವ ಇಂದಿನ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಶಾಲಾ-ಕಾಲೇಜುಗಳಲ್ಲಿ ಯಾವುದೇ ಸಭೆ, ಸಮಾರಂಭ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಡಲಾಗಿದೆ.
ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಲ್ಲಿ ಕೊರೋನಾ ಸೋಂಕು ಪತ್ತೆ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಸಾಮಾನ್ಯ ದರ 500 ರೂಪಾಯಿ ನಿಗದಿ ಮಾಡಲಾಗಿದ್ದು, ತುರ್ತಾಗಿ ಪರೀಕ್ಷೆಗೆ 3 ಸಾವಿರ ರೂಪಾಯಿ ದರ ನಿಗದಿ ಮಾಡಲಾಗಿದೆ. ಪ್ರಯಾಣಿಕರು ಅವರಿಗೆ ಬೇಕಾದ ಆಯ್ಕೆ ಮಾಡಿಕೊಳ್ಳಬಹುದು. ನೆಗೆಟಿವ್ ವರದಿ ಬಂದವರನ್ನμÉ್ಟೀ ವಿಮಾನ ನಿಲ್ದಾಣದಿಂದ ಹೊರಗೆ ಕಳುಹಿಸಲಾಗುವುದು ಎಂದು ತಿಳಿಸಿದರು